Tuesday, September 1, 2026
spot_img
More
    spot_img
    HomeLatest newsಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವುಡೆ ಲೋಕಾಯುಕ್ತ ದಾಳಿ

    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವುಡೆ ಲೋಕಾಯುಕ್ತ ದಾಳಿ

    ಬೆಂಗಳೂರು : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಮೈಸೂರು, ಬಳ್ಳಾರಿ, ಬೆಂಗಳೂರು,ಕೊಪ್ಪಳ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಮೈಸೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಧಿಕಾರಿಗಳ ನಿವಾಸಗಳಲ್ಲಿ ಬ್ಯಾಂಕ್ ಡಾಕ್ಯುಮೆಂಟ್, ಆಸ್ತಿ ದಾಖಲೆ, ಲೆಕ್ಕಪತ್ರಗಳು ಮತ್ತು ಆರ್ಥಿಕ ವ್ಯವಹಾರ ಸಂಬಂಧಿತ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ

    Advertisement

    *ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

    *ಸಾತಗಳ್ಳಿಯ ಜೆಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

    *ಕೊಪ್ಪಳ: ನಗರದ ನಿವಾಸಿಯಾಗಿರುವ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಆ್ಯಂಡ್ ಕಮರ್ಷಿಯಲ್ ಉಪ ನಿರ್ದೇಶಕ ಶೇಕು ಚವ್ವಾಣ್ ಅವರ ಮನೆ ಮೇಲೆ ಬುಧವಾರ ಬೆಳಗ್ಗಿನ ಜಾವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ

    *ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ದಾಳಿ;ಬಳ್ಳಾರಿ ನಗರದ ಮೂರು ಕಡೆ ಲೂಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ಟೌನ್ ಮತ್ತು ರೂರ್‌ಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸಂಬಂಧಿಸಿದ ಮೂರು ರಾಜಕೀಯ ಆಸ್ತಿಗಳ ಮೇಲೆ ಬೆಂಗಳೂರು ಲೋಕಾಯುಕ್ತ ತಂಡವು ತನಿಖೆ ನಡೆಸಿದ್ದು, ಆಸ್ತಿ ಗಳಿಕೆ ಆರೋಪಗಳ ಕುರಿತ ದಾಖಲಾತಿ ಪರಿಶೀಲನೆ ನಡೆದಿದೆ.

    ಬೆಂಗಳೂರು ನಂದಿನಿ ಬೂತ್‌ಗೆ ರೂ.1 ಕೋಟಿ 3 ಲಕ್ಷ ತೆರಿಗೆ ನೋಟಿಸ್

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading