ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಜುಲೈ.26ರವರೆಗೆ ವಿದೇಶ ಪ್ರವಾಸದಲ್ಲಿದ್ದಾರೆ.
ಈ ಬಾರಿ ಬ್ರಿಟನ್ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದು, ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸ್ವರೂಪ ನೀಡುವುದು ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು ಪ್ರಮುಖ ಗುರಿಯಾಗಿದೆ.
ಮೂರು ವರ್ಷಗಳ ಚರ್ಚೆಯ ಬಳಿಕ ಮೇ ತಿಂಗಳಿನಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದ್ದು, ಇದು ಭಾರತದ ಶೇಕಡಾ.99ರಷ್ಟು ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕಲಿದೆ. ಇದರಿಂದ ಬ್ರಿಟಿಷ್ ಉತ್ಪನ್ನಗಳಾದ ವಿಸ್ಕಿ ಮತ್ತು ಆಟೋ ಮೊಬೈಲ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸುಲಭ ಪ್ರವೇಶ ಸಿಗಲಿದೆ.
ಈ ಒಪ್ಪಂದವು ಭಾರತಕ್ಕೆ ಗಣನೀಯ ಆರ್ಥಿಕ ಉತ್ತೇಜನ ನೀಡಲಿದೆ. 2024ರಲ್ಲಿ 56.7 ಬಿಲಿಯನ್ ಡಾಲರ್ ಆಗಿರುವ ದ್ವಿಪಕ್ಷೀಯ ವಾಣಿಜ್ಯವನ್ನು 2030ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.
ಇನ್ನು ಬ್ರಿಟನ್ ಭೇಟಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, 25-26ರಂದು ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್ಸ್ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.
ಮಾಲ್ಡೀವ್ಸ್‌ನ ರಾಷ್ಟ್ರಪತಿ ಮೊಹಮ್ಮದ್ ಮುಯಿಝಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ ಅವರು ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿರುವ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆಸಲಿದ್ದಾರೆ.
ಥಿಯೇಟರ್‌ಗೆ ನುಗ್ಗಿ ಪವನ್ ಕಲ್ಯಾಣ್ ಚಿತ್ರದ ಬ್ಯಾನರ್‌ಗಳನ್ನು ಕಿತ್ತೆಸೆದ ಕನ್ನಡಿಗರು; ವಿಡಿಯೊ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


