Sunday, November 1, 2026
spot_img
More
    spot_img
    HomeLatest newsಧರ್ಮಸ್ಥಳ: ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದರ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

    ಧರ್ಮಸ್ಥಳ: ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದರ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

    ಹೊಸದಿಲ್ಲಿ: ಪ್ರಸ್ತುತ ನಡೆಯುತ್ತಿರುವ ಧರ್ಮಸ್ಥಳ ಸರಣಿ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ದೇವಾಲಯ ಹಾಗೂ ಹೆಗಡೆ ಕುಟುಂಬದ ಮಾನಹಾನಿಯಾಗುತ್ತಿದೆ ಎಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್‌ ಆರೋಪಿಸಿ 8842 ಲಿಂಕ್‌ಗಳನ್ನು ಡಿಲಿಟ್‌ ಮಾಡುವಂತೆ ಸೆಷನ್ಸ್‌ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

    ಬೆಂಗಳೂರು ಸೆಷನ್ಸ್‌ ಕೋರ್ಟ್‌ ಇದನ್ನು ಪರಿಗಣಿಸಿ ಆದೇಶ ಹೊರಡಿಸಿದ್ದು, ಇದರ ವಿರುದ್ಧ ಕನ್ನಡ ಖ್ಯಾತ ಯುಟ್ಯೂಬ್‌ ಚಾನೆಲ್ ʼಥರ್ಡ್‌ ಐ ಕನ್ನಡʼ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದರೆ ಈ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

    ಮುಖ್ಯ ನ್ಯಾಯಮೂರ್ತಿ ಬಿ.ಆರ್.‌ ಗವಾಯಿ ನೇತೃತ್ವದ ಪೀಠವು ವಿಚಾರಣೆಗೆ ನಿರಾಕರಿಸಿದೆ. ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೆ. ವಿನೋದ್‌ ಚಂದ್ರನ್‌ ಮತ್ತು ಜೋಯ್ಮಲ್ಯ ಬಾಗ್ಚಿ ಕೂಡ ಇದ್ದರು.

    ಇನ್ನು ಪೀಠವು ಅರ್ಜಿದಾರರಿಗೆ ನೀವು ಮೊದಲು ಉಚ್ಛ ನ್ಯಾಯಾಲಯಕ್ಕೆ ಹೋಗಬೇಕಿತ್ತು ಎಂದು ಸೂಚಿಸಿದೆ.

    ಸರ್ಕಾರಕ್ಕೇ ನೋಟಿಸ್‌ ಕೊಟ್ಟ ಸಾರಿಗೆ ನೌಕರರು; ಆಗಸ್ಟ್‌ 5ರಂದು ಮುಷ್ಕರ ಫಿಕ್ಸ್

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search