ಬೆಂಗಳೂರು: ಧರ್ಮಸ್ಥಳದಲ್ಲಿ ಸರಣಿ ಕೊಲೆ ನಡೆದಿದ್ದು, ಅವುಗಳ ಹೆಣಗಳನ್ನು ನಾನೇ ಹೂತು ಹಾಕಿದ್ದೇನೆ ಹಾಗೂ ಅವುಗಳ ಅಸ್ತಿಪಂಜರವನ್ನು ಅಗೆದು ಹೊರತೆಗೆಯುತ್ತೇನೆ ಎಂದು ದೂರು ದಾಖಲಾದ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆಗೆ ಆದೇಶ ಹೊರಡಿಸಿದೆ.
ಮೊದಲಿಗೆ ನಾಲ್ವರು ಐಪಿಎಸ್ ಅಧಿಕಾರಿಗಳ ಹೆಸರನ್ನು ಮಾತ್ರ ಸರ್ಕಾರ ಬಹಿರಂಗಪಡಿಸಿತ್ತು. ಇದೀಗ ಪ್ರಕರಣದ ಸಮಗ್ರ ತನಿಖೆಗಾಗಿ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಮತ್ತೆ 20 ಅಧಿಕಾರಿಗಳನ್ನು ನಿಯೋಜನೆ ಮಾಡಿ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ.ಪ್ರಣವ್ ಮೊಹಾಂತಿ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್.ಅನುಚೇತ್, ಸಿಎಆ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ.
ನಿಯೋಜನೆಗೊಂಡ ಅಧಿಕಾರಿ, ಸಿಬ್ಬಂದಿ: ಮಂಗಳೂರು ಡಿಸಿಆರ್ಇ ಎಸ್.ಪಿ ಆದ ಸಿ.ಎ ಸಿಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್ಪಿ, ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್ಪಿ ಮಂಜುನಾಥ್, ಸಿಎಸ್ಪಿ ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ಇ.ಸಿ ಸಂಪತ್, ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಇನ್ ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ತು ತೇಜ್, ಸಿಎಸ್ಪಿ ಸಬ್ಇನ್ಸ್ಪೆಕ್ಟರ್ಗಳಾದ ಕೋಕಿಲ ನಾಯಕ್, ವೈಲೆಟ್ ಫೆಮಿನಾ, ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್ಎಂ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜ್ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಜಿಲ್ಲೆ ಅಂಕೋಲದ ಸಬ್ಇನ್ಸ್ಪೆಕ್ಟರ್ ಆರ್.ಸುಹಾಸ್, ಮುಂದುಗೋಡು ಸಬ್ಇನ್ಸ್ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಕ್ಸಾಂ ಸಬ್ಇನ್ಸ್ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಠಾಣೆಯ ಎಎಸ್ಐ ಶುಭಾಷ್ ಕಾಮತ್, ಉಡುಪಿ ಕೌಪ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಹರೀಶ್ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್ಕಾನ್ಸ್ಟೆಬಲ್ ಪ್ರಕಾಶ್, ಉಡುಪಿ ಕುಂದಾಪುರನಗರ ಠಾಣೆಯ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್ಎಂಎಸ್ ಹೆಡ್ಕಾನ್ಸ್ಟೆಬಲ್ ದೇವರಾಜ್.
ಮಂಡ್ಯ: ವಿದ್ಯುತ್ ಸ್ಪರ್ಶಕ್ಕೆ ಆನೆ ಬಲಿ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


