ಬೆಂಗಳೂರು: ಇನ್ನು ಮುಂದೆ ರಾಜ್ಯದ ಅರಣ್ಯ ಪ್ರದೇಶದೊಳಗೆ ದನಕರುಗಳು, ಮೇಕೆ, ಕುರಿ ಮುಂತಾದ ಸಾಕು ಪ್ರಾಣಿಗಳನ್ನು ಬಿಟ್ಟು ಮೇಯಿಸುವುದನ್ನು ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಅರಣ್ಯ ಪ್ರದೇಶದಲ್ಲಿ ದನಕರುಗಳು, ಕುರಿ, ಮೇಕೆ ಮುಂತಾದ ಸಾಕುಪ್ರಾಣಿಗಳನ್ನು ಮೇಯಿಸಲು ಹೋಗಿ ವನ್ಯಪ್ರಾಣಿಗಳ ದಾಳಿಗೆ ತುತ್ತಾಗಿ ಪ್ರಾಣಹಾನಿ ಸಂಭವಿಸು ತಿರುವುದು, ಜಾನುವಾರುಗಳು ಮೃತಪಡುತ್ತಿರುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂಬಂಧ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ನಿಯಮಾನುಸಾರ ಕ್ರಮ ವಹಿಸುವಂತೆ ತಿಳಿಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.
ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಾಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಕಾಡಿಗೆ ಮೇಯಲು ಹೋಗುವ ಪ್ರಾಣಿ ಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೊಪ್ಪಳ: ಶಾಲೆಗೆ ತಡವಾಗುತ್ತೆ ಎಂದು ಸೇತುವೆ ಬದಲು ಪೈಪ್ ಮೇಲೆ ಹತ್ತಿದ ವಿದ್ಯಾರ್ಥಿನಿ; ನಡೆದೇ ಹೋಯ್ತು ದುರಂತ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


