Monday, August 31, 2026
spot_img
More
    spot_img
    HomeLatest newsಆಮಿರ್‌ ಖಾನ್‌, ಬಚ್ಚನ್‌ರಿಂದ ಕಾರು ಖರೀದಿ; ಕೆಜಿಎಫ್‌ ಬಾಬು ಮನೆ ಮೇಲೆ ದಾಳಿ

    ಆಮಿರ್‌ ಖಾನ್‌, ಬಚ್ಚನ್‌ರಿಂದ ಕಾರು ಖರೀದಿ; ಕೆಜಿಎಫ್‌ ಬಾಬು ಮನೆ ಮೇಲೆ ದಾಳಿ

    ಬೆಂಗಳೂರು: ಕಾಂಗ್ರೆಸ್ ಮುಖಂಡರಾಗಿದ್ದ ಕೆಜಿಎಫ್ ಬಾಬು ಅವರ ಮನೆಯ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐಶಾರಾಮಿ ಕಾರುಗಳಿಗೆ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ.

    Advertisement

    ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ. ಕೆಜಿಎಫ್ ಬಾಬು ಬಳಿ ಎರಡು ರೋಲ್ಸ್ ರಾಯ್ಸ್ ಕಾರಿದೆ. ಅಮಿತಾಭ್ ಬಚ್ಚನ್ ಹಾಗೂ ಆಮಿರ್ ಖಾನ್ ಒಂದು ವರ್ಷ ಮಾತ್ರ ಬಳಸಿದ್ದ ಕಾರನ್ನು ಕೆಜಿಎಫ್ ಬಾಬು ಖರೀದಿಸಿ ತಂದಿದ್ದರು.

    ಈಗ ಬಾಬು ತೆರಿಗೆ ಕಟ್ಟದ ಕಾರಣ ಆರ್‌ಟಿಓ ಜಂಟಿ ಆಯುಕ್ತೆ ಶೋಭಾ ನೇತೃತ್ವದ ತಂಡ ಬಾಬು ಮನೆಯ ಮೇಲೆ ದಾಳಿ ನಡೆಸಿತು. ಈ ವೇಳೆ ಗೇಟ್ ತೆಗೆಯದೆ ಕೆಜಿಎಫ್ ಬಾಬು ಮೊಂಡಾಟ ಪ್ರದರ್ಶಿಸಿದರು.

    ಅಮಿತಾಬ್‌ ಬಚ್ಚನ್‍ರವರಿಂದ 2019ರಲ್ಲಿ ಖರೀದಿಸಿದ್ದ ರೋಲ್ಸ್‌ ರಾಯ್ಸ್‌ಗೆ ಉತ್ಪಾದಕ ಸಂಸ್ಥೆಯ ಇನ್ವಾಯ್ಸ್ ಲಭ್ಯವಿಲ್ಲ ಎನ್ನಲಾಗಿದೆ. ಅಮಿರ್‌ ಖಾನ್‌ರಿಂದ 2 ವರ್ಷಗಳ ಹಿಂದೆ ಇನ್ನೊಂದು ರೋಲ್ಸ್ ರಾಯ್ಸ್ ಅನ್ನು ಖರೀದಿಸಿದ್ದಾರೆ. ಈ ಎರಡೂ ಕಾರುಗಳು ಮಹಾರಾಷ್ಟ್ರದಲ್ಲಿ ನೋಂದಣಿಯಾಗಿವೆ. ಹೀಗಾಗಿ ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಕೆಜಿಎಫ್ ಬಾಬು ಅವರ ಮನೆಗೆ ದಾಳಿ ಮಾಡಿದರು. ವಾಹನಗಳನ್ನು ಜಪ್ತಿ ಮಾಡಲು ಮುಂದಾದಾಗ ಕೆಜಿಎಫ್ ಬಾಬು ವಿರೋಧ ವ್ಯಕ್ತಪಡಿಸಿದ್ದಾರೆ.

    ಎರಡು ವಾಹನಗಳನ್ನೂ ಮಹಾರಾಷ್ಟ್ರದಲ್ಲಿರುವ ನಮ್ಮ ಕಚೇರಿ ಮೂಲಕ ಮುಂಬೈನಲ್ಲೇ ನೋಂದಣಿ ಮಾಡಿಸಿದ್ದೇನೆ. ಅಲ್ಲಿ 15 ದಿನ, ಇಲ್ಲಿ 15 ದಿನ ವಾಹನಗಳು ಸಂಚರಿಸುತ್ತವೆ. ಕರ್ನಾಟಕ ರಾಜ್ಯದಲ್ಲೂ ತೆರಿಗೆ ಪಾವತಿಸಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ನೋಟೀಸ್ ಕೊಟ್ಟರೆ ತಕ್ಷಣ ತಾವು ತೆರಿಗೆ ಪಾವತಿಸಲು ಸಿದ್ಧರಿರುವುದಾಗಿ ಕೆಜಿಎಫ್ ಬಾಬು ಹೇಳಿದ್ದಾರೆ.

    ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಶೋಭಾ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಕೊನೆಗೆ ಕೆಜಿಎಫ್ ಬಾಬು ಅವರು ಅಮಿತಾಬ್‌ ಬಚ್ಚನ್ ಅವರಿಂದ ಖರೀದಿಸಿದ ಕಾರಿಗೆ 19 ಲಕ್ಷದ 73 ಸಾವಿರ ರೂ, ಅಮೀರ್‌ಖಾನ್‌ರಿಂದ ಖರೀದಿಸಿದ ಕಾರಿಗೆ 18 ಲಕ್ಷದ 53 ಸಾವಿರ ರೂ. ಗಳ ತೆರಿಗೆಯನ್ನು ಡಿಡಿ ಮೂಲಕ ಪಾವತಿಸಿದರು. ಕೊನೆಗೆ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಕೆಜಿಎಫ್ ಬಾಬು ಶ್ಲಾಘಿಸಿದರು.

    ಆರೋಗ್ಯವಂತರಾಗಲು ದಿನಕ್ಕೆ ಎಷ್ಟು ಹೆಜ್ಜೆ ನಡೆಯಬೇಕು? ಯಾವ ವಯಸ್ಸಿನವರು ಎಷ್ಟು ಹೆಜ್ಜೆ ನಡೆಯಬೇಕು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading