ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಸೋಲಾರ್ ಕೃಷಿ ಪಂಪ್ ಸೆಟ್ಗಳನ್ನು ಅಳವಡಿಸುವ ಗುರಿಯನ್ನು ಸಾಧಿಸಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಟ್ಟಾರೆ ಶೇ.80ರಷ್ಟು ಸಬ್ಸಿಡಿ ಒದಗಿಸಲಿವೆ. ಇದರಲ್ಲಿ ಕೇಂದ್ರ ಸರ್ಕಾರ ಶೇ.30 ಮತ್ತು ರಾಜ್ಯ ಸರ್ಕಾರ ಶೇ.50ರಷ್ಟು ಸಹಾಯಧನವನ್ನು ನೀಡಲಿದ್ದು, ಫಲಾನುಭವಿಗಳು ಉಳಿದ ಶೇ.20ರಷ್ಟು ಭರಿಸಬೇಕಾಗಿದೆ.
ಸಭೆಯಲ್ಲಿ 40,000 ಪಂಪ್ ಸೆಟ್ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಆದೇಶಿಸಲಾಗಿದೆ. ಇದೇ ವೇಳೆ, 25,000ಕ್ಕೂ ಹೆಚ್ಚು ರೈತರು ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಈ ಯೋಜನೆಗೆ ಒಟ್ಟು ₹752 ಕೋಟಿ ರೂಪಾಯಿ ವೆಚ್ಚವನ್ನು ಮಾಡಲಿದ್ದು, ಸಮರ್ಪಕ ಅನುಷ್ಠಾನದ ಮೂಲಕ ಸಬ್ಸಿಡಿ ಮೊತ್ತವನ್ನು ಕಡಿಮೆ ಮಾಡುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.
ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಒದಗಿಸಲು ಟ್ರಾನ್ಸ್ಫಾರ್ಮರ್ಗಳನ್ನು ಇಲಾಖೆಯಿಂದ ಒದಗಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಗಿದೆ. 2024-25ರ ಸಾಲಿನಲ್ಲಿ ನೀರಾವರಿ ಪಂಪ್ ಸೆಟ್ಗಳಿಗೆ ₹12,785 ಕೋಟಿ ರೂಪಾಯಿಗಳ ಅನುದಾನವನ್ನು ಹಂಚಿಕೆ ಮಾಡಲಾಗಿದ್ದು, ಫೆಬ್ರವರಿ 2025ರ ವರೆಗೆ ₹11,720 ಕೋಟಿ ಬಿಡುಗಡೆಯಾಗಿದೆ. 2025-26ರಲ್ಲಿ ₹16,021 ಕೋಟಿ ರೂಪಾಯಿಗಳ ಆಯವ್ಯಯವನ್ನು ಘೋಷಿಸಲಾಗಿದೆ.
ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಪ್ಪಳ: ಶಾಲೆಗೆ ತಡವಾಗುತ್ತೆ ಎಂದು ಸೇತುವೆ ಬದಲು ಪೈಪ್ ಮೇಲೆ ಹತ್ತಿದ ವಿದ್ಯಾರ್ಥಿನಿ; ನಡೆದೇ ಹೋಯ್ತು ದುರಂತ!
ಎಐ ಕನ್ನಡ ಕ್ಷಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


