Thursday, November 5, 2026
spot_img
More
    spot_img
    HomeStateDistrictರಾಜ್ಯದಲ್ಲಿ 28ರವರೆಗೂ ಮುಂದುವರಿಯಲಿದೆ ಮಳೆ; ಈ 3 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

    ರಾಜ್ಯದಲ್ಲಿ 28ರವರೆಗೂ ಮುಂದುವರಿಯಲಿದೆ ಮಳೆ; ಈ 3 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಸಕ್ರಿಯವಾಗಿದ್ದು, ಕರಾವಳಿ ಜತೆಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಎಲ್ಲ ಪ್ರದೇಶಗಳಿಗೂ ವ್ಯಾಪಿಸಿಕೊಂಡಿದೆ.

    ಆಷಾಢ ಮಾಸ ಕೊನೆಗೊಳ್ಳುತ್ತಿರುವ ಅಂತಿಮ ಚರಣದಲ್ಲಿ ‘ಪುಷ್ಯ’ ಮಳೆ ವ್ಯಾಪಕವಾಗಿ ಸುರಿಯಲಾರಂಭಿಸಿದೆ.

    ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಸುರಿಯಲಿರುವ ಕಾರಣ ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಜತೆಗೆ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಿಗೂ 28ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

    ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬೀಳುವ ವೇಳೆ ಗಾಳಿಯು ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಕರಾವಳಿ ತೀರದುದ್ದಕ್ಕೂ ಮಳೆ ಜತೆ ಗಾಳಿಯು ವೇಗವಾಗಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಕಳೆದ ಕೆಲ ದಿನಗಳಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿತ್ತು. ಹವಾಮಾನದಲ್ಲಿ ಬದಲಾವಣೆ ಆಗಿರುವ ಕಾರಣ ಮಂಗಳವಾರದಿಂದಲೇ ವ್ಯಾಪಕ ಮಳೆ ಬೀಳತೊಡಗಿದೆ. ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಹೆಚ್ಚಿನ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ‌ಶಸ್ತ್ರಚಿಕಿತ್ಸೆ ಮಾಡಿ ಶ್ವಾಸನಾಳದಲ್ಲಿದ್ದ ಕರಿಮೆಣಸು ಹೊರತೆಗೆದ ಬೆಂಗಳೂರು ವೈದ್ಯರು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search