Tuesday, September 1, 2026
spot_img
More
    spot_img
    HomeLatest newsಒಳಮೀಸಲಾತಿ: ಸಂಪುಟದಲ್ಲಿ ಮಂಡನೆ ಆಗದಿದ್ದರೆ ಮಾದಿಗ ಸಂಘಟನೆಗಳಿಂದ ಕರ್ನಾಟಕ ಬಂದ್

    ಒಳಮೀಸಲಾತಿ: ಸಂಪುಟದಲ್ಲಿ ಮಂಡನೆ ಆಗದಿದ್ದರೆ ಮಾದಿಗ ಸಂಘಟನೆಗಳಿಂದ ಕರ್ನಾಟಕ ಬಂದ್

    ಬೆಂಗಳೂರು: ಒಳ ಮೀಸಲಾತಿ ವಿಳಂಬವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಆಗಸ್ಟ್ 1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್‌ ಪ್ರತಿಭಟನೆ ನಡೆಸಲು ಮಾದಿಗರ ಸಂಘಟನೆಗಳು ತೀರ್ಮಾನ ಮಾಡಿವೆ ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

    Advertisement

    ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಗಸ್ಟ್ 1ಕ್ಕೆ ನ್ಯಾಯಮೂರ್ತಿ ಚಂದ್ರಚೂಡ ಅವರು ತೀರ್ಪು ಕೊಟ್ಟು ಒಂದು ವರ್ಷ ಪೂರ್ಣಗೊಳ್ಳಲಿದೆ. ರಾಜ್ಯ ಸರಕಾರ ಆ.10ರಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಮಂಡಿಸದೆ ಇದ್ದಲ್ಲಿ ರಾಜ್ಯದ ಮಾದಿಗರು ಕರ್ನಾಟಕ ಬಂದ್‌ಗೆ ತೀರ್ಮಾನ ಮಾಡಲಿದ್ದೇವೆ. 4-5 ಸಾವಿರ ಜನರ ಸಭೆ ನಡೆಸಿ ಈ ಕುರಿತು ತೀರ್ಮಾನಿಸಲಿದ್ದೇವೆ ಎಂದರು.

    ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸರಕಾರವು ಆಗಸ್ಟ್ 16ರಿಂದ ಒಳ ಮೀಸಲಾತಿ ಜಾರಿ ಮಾಡಲು ಪ್ರಯತ್ನ ಮಾಡಬೇಕು. ಅಸಹಕಾರ ಚಳವಳಿಗೆ ಅವಕಾಶ ಮಾಡಿ ಕೊಡಬಾರದು. ಒಳಮೀಸಲಾತಿ ಜಾರಿಗಾಗಿ ನಿರ್ಣಾಯಕ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು.

    ಮಂಡ್ಯ: ವಿದ್ಯುತ್‌ ಸ್ಪರ್ಶಕ್ಕೆ ಆನೆ ಬಲಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading