Wednesday, September 2, 2026
spot_img
More
    spot_img
    HomeLatest newsಬೆಂಗಳೂರು ಟ್ರಾಫಿಕ್‌ ಜಾಮ್‌ ತಗ್ಗಿಸಲು ವಿಪ್ರೊ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜೀಗೆ ಪತ್ರ ಬರೆದ ಸಿದ್ದರಾಮಯ್ಯ

    ಬೆಂಗಳೂರು ಟ್ರಾಫಿಕ್‌ ಜಾಮ್‌ ತಗ್ಗಿಸಲು ವಿಪ್ರೊ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜೀಗೆ ಪತ್ರ ಬರೆದ ಸಿದ್ದರಾಮಯ್ಯ

    ಬೆಂಗಳೂರು: ನಗರದ ಸಂಚಾರ ದಟ್ಟಣೆ ತಗ್ಗಿಸಲು ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸಹಕರಿಸುವಂತೆ ವಿಪ್ರೊ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜೀ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

    Advertisement

    ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ ಪರಿಸರ ಹಾಗೂ ಒಟ್ಟಾರೆ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ವಿಪ್ರೊ ಸಂಸ್ಥೆಯ ಕೊಡುಗೆ ಪ್ರಶಂಸನೀಯ ಎಂದಿದ್ದಾರೆ.

    ಪ್ರಸ್ತುತ ದಿನಗಳಲ್ಲಿ ಬೆಂಗಳೂರು ಸಂಚಾರ ದಟ್ಟಣೆಯ ಸವಾಲು ಎದುರಿಸುತ್ತಿದೆ. ವಿಶೇಷವಾಗಿ ಹೊರವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್‌ನಲ್ಲಿ ಪೀಕ್‌ ಅವರ್‌ನ ಸಂಚಾರ ಸಮಸ್ಯೆ ಗಂಭೀರವಾಗಿದೆ. ಸುಗಮ ಸಂಚಾರಕ್ಕೆ, ಉತ್ಪಾದಕತೆಗೆ ಹಾಗೂ ಗುಣಮಟ್ಟದ ಜೀವನಕ್ಕೆ ಇದು ವ್ಯತಿರಿಕ್ತವಾಗಿದೆ ಎಂದು ಹೇಳಿದ್ದಾರೆ.

    ವಿಪ್ರೊ ಕಚೇರಿಗೆ ಸುಗಮ ಸಂಚಾರ ಕಲ್ಪಿಸಲು ಪರಸ್ಪರ ಒಪ್ಪಂದದ ಹಾಗೂ ಭದ್ರತಾ ಷರತ್ತುಗಳೊಂದಿಗೆ ಕೆಲಸ ಮಾಡುವ ಅಗತ್ಯ ಇದೆ ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿಯವರು, ಇಬ್ಬಲೂರು ಜಂಕ್ಷನ್‌ನಲ್ಲಿ ತೆಗೆದುಕೊಳ್ಳಬೇಕಾದ ಯೋಜನೆಗಳಿಂದ ಶೇ. 30 ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ ಎಂದಿದ್ದಾರೆ.

    ಈ ವಿಷಯವಾಗಿ ನಿಮ ಬೆಂಬಲ ಅಗತ್ಯವಿದೆ. ಬೆಂಗಳೂರನ್ನು ವಾಸಯೋಗ್ಯ ನಗರವನ್ನಾಗಿಸಲು ಸಹಕಾರ ನೀಡಿ. ನಿಮ ತಂಡ ನಮ ಸರ್ಕಾರದ ಅಧಿಕಾರಿಗಳ ಜೊತೆ ಸೇರಿ ಕೆಲಸ ಮಾಡುವ ಸಂದರ್ಭವನ್ನು ತಾವು ಶ್ಲಾಘಿಸುವುದಾಗಿ ಹೇಳಿದ್ದಾರೆ.

    ಮೈಸೂರು ದಸರಾ 2025: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading