ದಕ್ಷಿಣ ಕನ್ನಡ: ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಾಗೂ ಇತ್ತೀಚೆಗೆ ಧರ್ಮಸ್ಥಳ ವಿಚಾರದಲ್ಲಿ ನ್ಯಾಯಕ್ಕಾಗಿ ದನಿ ಎತ್ತಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ 32 ಪ್ರಕರಣಗಳು ದಾಖಲಾಗಿರುವ ಕಾರಣ ಪುತ್ತೂರು ವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆಯ ಸೆಕ್ಷನ್ 55ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದ್ದು, ಬೆಳ್ತಂಗಡಿ ಪೊಲೀಸರ ವರದಿಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದ್ದು, ಒಂದು ವರ್ಷದ ಅವಧಿಗೆ ಗಡಿಪಾರು ಇರಲಿದೆ.
ಮೈಸೂರು ದಸರಾ 2025: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


