ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ ಆಸನ ಸಾಮಥ್ರ್ಯವನ್ನು 65,000 ರಿಂದ 40,000 ಕ್ಕೆ ಇಳಿಕೆ ಮಾಡಲು ನಿರ್ಧರಿಸಿದೆ.
ಈ ವರ್ಷ ಕನಿಷ್ಠ 25,000 ಆಸನಗಳನ್ನು ಕಡಿಮೆ ಮಾಡಲಾಗುವುದು,. ದೊಡ್ಡ ಸಭೆಗಳನ್ನು ನಿರ್ವಹಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿರಲು ಪಾಸ್‍ಗಳನ್ನೂ ಕೂಡ ಕಡಿಮೆ ಮುದ್ರಿಸಲಾಗಿದೆ.
ಮೈಸೂರು ಜಿಲ್ಲಾ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಅಧಿಕಾರಿಗಳ ಮತ್ತು ದಸರಾ ಉಪಸಮಿತಿಯ ಸಭೆ ನಡೆಸಿ, ದಸರಾ ಹಬ್ಬ ಮತ್ತು ಸುರಕ್ಷಿತಾಕ್ರಮ ಅಗತ್ಯ ಕುರಿತು ಸೂಚನೆಗಳನ್ನು ನೀಡಿದ್ದಾರೆ.ಕಳೆದ ವರ್ಷ ಸುಮಾರು 60,000 ಇದ್ದ ಆಸನ ವ್ಯವಸ್ಥೆಯನ್ನು ಈ ವರ್ಷ 45,000 ಅಥವಾ ಅದಕ್ಕಿಂತ ಕಡಿಮೆಗೆ ಇಳಿಸಲಾಗುವುದು.
ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ. ಪ್ರತಿ ವರ್ಷ ಪಾಸ್‍ಗಳ ಅವ್ಯವಸ್ಥೆ, ಸಾಮಥ್ರ್ಯಕ್ಕಿಂತ ಹೆಚ್ಚಿನ ಪಾಸ್‍ಗಳನ್ನು ಮುದ್ರಿಸಲಾಗುತ್ತಿದೆ, ಲಾಬಿ ನಡೆಸಲಾಗುತ್ತದೆ ಎಂಬ ದೂರುಗಳು ಕೇಳಿಬರುವ ಹಿನ್ನೆಲೆಯಲ್ಲಿ ವರ್ಷ ಉಪಸಮಿತಿಯು ಆಸನ ಲಭ್ಯತೆ ಇರುವಷ್ಟು ಮಾತ್ರ ಮುದ್ರಿಸಲು ನಿರ್ಧರಿಸಿದೆ.
ಏತನ್ಮಧ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ.
ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್ಗಳನ್ನೂ ಬಿಡುತ್ತಿಲ್ಲ. ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ.
ಹಬ್ಬದ ಸಮಯದಲ್ಲಿ ಎಲ್ಲಾ ಪಾರಂಪರಿಕ ಕಟ್ಟಡಗಳ ಬಾಲ್ಕನಿಗಳು ಮತ್ತು ಮೇಲ್ಛಾವಣಿಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ.ಮೆರವಣಿಗೆಯನ್ನು ವೀಕ್ಷಿಸಲು ಯಾವುದೇ ವ್ಯಕ್ತಿ ಅಥವಾ ಗುಂಪು ಪಾರಂಪರಿಕ ರಚನೆಗಳ ತುದಿಗೆ ಹತ್ತಲು ಅವಕಾಶ ನೀಡಬಾರದು ಎಂದು ಆದೇಶಿಸಲಾಗಿದೆ.
ಮೈಸೂರು ದಸರಾ 2025: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


