Saturday, March 28, 2026
spot_img
More
    spot_img
    HomeLatest newsಲಾಲೂ ನಿವಾಸದಲ್ಲಿ ಹೈ ವೋಲ್ಟೇಜ್ ಮೀಟಿಂಗ್: ಮಹತ್ವದ ಘೋಷಣೆ ಬಾಕಿ

    ಲಾಲೂ ನಿವಾಸದಲ್ಲಿ ಹೈ ವೋಲ್ಟೇಜ್ ಮೀಟಿಂಗ್: ಮಹತ್ವದ ಘೋಷಣೆ ಬಾಕಿ

    ಲಾಲೂ ನಿವಾಸದಲ್ಲಿ ಹೈ ವೋಲ್ಟೇಜ್ ಮೀಟಿಂಗ್, 24 ಗಂಟೆ ಕಾದು ನೋಡಿ ಎಂಬ ಸಂದೇಶ, ಸೀಟು ಹಂಚಿಕೆ ಫೈನಲ್, ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ ಎಂದು ಘೋಷಣೆ…

    ಬಿಹಾರದ ವಿಧಾನಸಭಾ ಚುನಾವಣೆ-2025 ಮತದಾನದ ದಿನಾಂಕ ಹತ್ತಿರವಾದರೂ ರಾಜ್ಯದ ವಿರೋಧ ಪಕ್ಷಗಳ ಮಹಾಘಟಬಂಧನ್ ಸೀಟು ಹಂಚಿಕೆ ಸಂಘರ್ಷ ಕೊನೆಗೊಂಡಿಲ್ಲ. ಆದರೆ ಬುಧವಾರ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ನಿವಾಸದಲ್ಲಿ ನಡೆದ ಸಭೆ ಕುತೂಹಲಕ್ಕೆ ಕಾರಣವಾಗಿದೆ.

    ಕಾಂಗ್ರೆಸ್‌ನ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಲಾಲೂ ಪ್ರಸಾದ್ ಯಾದವ್ ನಿವಾಸದಲ್ಲಿ ನಡೆದ ಸಭೆ ಹಲವು ತೀರ್ಮಾನವನ್ನು ಕೈಗೊಂಡಿದೆ. ಈ ಸಭೆಯ ಬಳಿಕ ಮಾತನಾಡಿದ ತೇಜಸ್ವಿ ಯಾದವ್, “24 ಗಂಟೆ ಕಾದು ನೋಡಿ” ಎಂದು ಒಂದೇ ಸಾಲಿನ ಪ್ರತಿಕ್ರಿಯೆ ನೀಡಿದ್ದಾರೆ.

    ಸಿಎಂ ಅಭ್ಯರ್ಥಿ ಘೋಷಣೆ: ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷದ ಮೂಲಗಳ ಮಾಹಿತಿಯಂತೆ ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಎಂದು ಗುರುವಾರ ಘೋಷಣೆಯಾಗಲಿದೆ. ಮೈತ್ರಿಕೂಟದ ಎಲ್ಲಾ ಪಕ್ಷಗಳು ಈ ಘೋಷಣೆಗೆ ಒಮ್ಮತದ ಅನುಮೋದನೆ ನೀಡಿವೆ.

    ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿ ಘೋಷಣೆ ಬೇಡ ಎಂಬ ನಿಲುವು ಮಹಾಘಟಬಂಧನ್ ಮೈತ್ರಿಕೂಟದಲ್ಲಿತ್ತು. ಆದರೆ ಸೀಟು ಹಂಚಿಕೆ ಗೊಂದಲದ ಕಾರಣ ಮಹಾಘಟಬಂಧನ್ ಈಗ ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿಯೇ ಚುನಾವಣೆ ಎದುರಿಸಲಿದೆ.

    243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6, 11ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಗುರುವಾರ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ ಬಳಿಕ ಮಹಾಘಟಬಂಧನ್ ‘Chalo Bihar, Badlein Bihar’ ಎಂಬ ಪ್ರಚಾರ ಘೋಷವಾಕ್ಯವನ್ನು ಬಿಡುಗಡೆ ಮಾಡಲಿದ್ದಾರೆ.

    ಮಹಾಘಟಬಂಧನ್ ಮೈತ್ರಿಕೂಟದ ಪಕ್ಷಗಳು ಈ ಘೋಷಣೆಯ ಮೂಲಕವೇ ಚುನಾವಣೆಯನ್ನು ಎದುರಿಸಲಿವೆ. 2ನೇ ಹಂತದ ನಾಮಪತ್ರ ಸಲ್ಲಿಕೆಯ ಅವಧಿ ಮುಕ್ತಾಯಗೊಂಡರೂ ಸಹ ಸೀಟು ಹಂಚಿಕೆ ಮಾತುಕತೆಗಳು ಅಂತಿಮವಾಗಿಲ್ಲ. ಈ ಕಗ್ಗಂಟು ಪರಿಹರಿಸುವ ಅಂತಿಮ ಪ್ರಯತ್ನವಾಗಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಬುಧವಾರ ಪಾಟ್ನಾಗೆ ಆಗಮಿಸಿದ್ದರು. ಮೈತ್ರಿಕೂಟದ ಪಕ್ಷಗಳ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಪರಿಹರಿಸಿದ್ದಾರೆ.

    ಅಶೋಕ್ ಗೆಹ್ಲೋಟ್ ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ತೇಜಸ್ವಿ ಯಾದವ್,”ಇಂದು ಗೌರವಾನ್ವಿತ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಅವರೊಂದಿಗೆ ಚುನಾವಣೆ ಕುರಿತು ಫಲಪ್ರದ ಚರ್ಚೆ ನಡೆಸಿದೆ” ಎಂದು ಹೇಳಿದ್ದು, ತಮ್ಮ ಮತ್ತು ಗೆಹ್ಲೋಟ್ ಅವರ ಸಭೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

    ಮಾಧ್ಯಮಗಳ ಮಾತನಾಡಿದ ಅಶೋಕ್ ಗೆಹ್ಲೋಟ್, “ಮೈತ್ರಿಕೂಟದ ಒಳಗೆ ಅಸಮಾಧಾನವಿದೆ ಎಂಬ ವರದಿಗಳನ್ನು ತಳ್ಳಿಹಾಕಿದರು. 243 ಸದಸ್ಯರ ವಿಧಾನಸಭೆಯಲ್ಲಿ 5–10 ಕ್ಷೇತ್ರಗಳಲ್ಲಿ ಫ್ರೆಂಡ್ಲಿ ಫೈಟ್‌ ನಡೆಯುವುದು ದೊಡ್ಡ ವಿಷಯವಲ್ಲ” ಎಂದರು.

    ಆರ್‌ಜೆಡಿ ಪಕ್ಷ 143 ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಕ್ಷ 61 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ನವೆಂಬರ್ 6ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಮುನ್ನ ಮೈತ್ರಿಕೂಟವು ತನ್ನ ಸೀಟು ಹಂಚಿಕೆ ಅಂತಿಮಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಮಹಾಘಟಬಂಧನ್‌ನಲ್ಲಿ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳು 6 ಕ್ಷೇತ್ರಗಳಲ್ಲಿ ಎದುರಾಳಿಗಳಾಗಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading