Monday, November 2, 2026
spot_img
More
    spot_img
    HomeLatest newsಬೆಂಗಳೂರಿಗರೇ ಗಮನಿಸಿ: ಈ 2 ದಿನಗಳ ಕಾಲ ಇಲ್ಲ ಬೆಸ್ಕಾಂ ಆನ್‌ಲೈನ್‌ ಸೇವೆ

    ಬೆಂಗಳೂರಿಗರೇ ಗಮನಿಸಿ: ಈ 2 ದಿನಗಳ ಕಾಲ ಇಲ್ಲ ಬೆಸ್ಕಾಂ ಆನ್‌ಲೈನ್‌ ಸೇವೆ

    ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ವಿದ್ಯುತ್‌ ಸರಬರಾಜು ಕಂಪನಿಗಳ (ಎಸ್ಕಾಂ) ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

    ವಿದ್ಯುತ್ ಬಿಲ್ ಜಕಾತಿ ಬದಲಾವಣೆ ಪಾವತಿ, ಹೆಸರು ಬದಲಾವಣೆ, ಹಾಗೂ ಹೊಸ ಸಂಪರ್ಕ ಸೇರಿ ಆನ್‌ಲೈನ್‌ ಆಧಾರಿತ ಸೇವೆಗಳು ಶುಕ್ರವಾರ (ಅ.24) ರಾತ್ರಿ 8 ಗಂಟೆಯಿಂದ ಶನಿವಾರ (ಅ.25) ಮಧ್ಯಾಹ್ನ 1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

    https://www.bescom. co.in ಪೋರ್ಟಲ್ ಮೂಲಕ ಸೇವೆಗಳು ಲಭ್ಯವಿರುವುದಿಲ್ಲ. ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆ್ಯಪ್, ಬೆಂಗಳೂರು ಒನ್, ಕರ್ನಾಟಕ ಒನ್ ಇತ್ಯಾದಿ ಮೂರನೇ ತಂಡದ ಪಾವತಿ ವಿಧಾನಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಕೋರಿದೆ. ಆನ್‌ಲೈನ್ ಸೇವೆ

    ಎಲ್ಲೆಲ್ಲಿ ಇರುವುದಿಲ್ಲ?: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲ ಉಪ ವಿಭಾಗಗಳು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚೆನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್.

    ಭಾರತ ಹಾಗೂ ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ; ಮತ್ತೊಮ್ಮೆ ಹೇಳಿದ ಟ್ರಂಪ್!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search