ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9,230 ಮತಗಳ ಅಂತರದಿಂದ ಜಯಗಳಿಸಿದ್ದಾರೆ
ಕಳೆದ ವರ್ಷ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಇ ತುಕಾರಾಂ ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿ ಗೆದ್ದಿದ್ದರು. ಹೀಗಾಗಿ ಇ ತುಕಾರಾಂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾರಣ ಈ ಉಪಚುನಾವಣೆ ನಡೆದಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


