ಬೆಂಗಳೂರು: ಇಂದು ( ನವೆಂಬರ್ 23 ) ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ 17ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9105 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಭಾರೀ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 10ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ 18,898 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಯಾಸೀರ್ ಪಠಾಣ್ ಭರ್ಜರಿ ಮುನ್ನಡೆಯನ್ನು ಸಾಧಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


