Friday, August 7, 2026
spot_img
More
    spot_img
    HomeStateಉಪಚುನಾವಣೆ: ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಸೋಲು; ಸಂಸದರ ಪತ್ನಿಗೆ ಜಯ

    ಉಪಚುನಾವಣೆ: ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಸೋಲು; ಸಂಸದರ ಪತ್ನಿಗೆ ಜಯ

    ಬೆಂಗಳೂರು- ರಾಜ್ಯದ ವಿಧಾನಸಭಾ ಉಪಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸೋಲು ಕಾಣುವ ಮೂಲಕ ಸಂಸದರ ಪತ್ನಿ ಗೆದ್ದಿದ್ದಾರೆ.

    Advertisement

    ಪ್ರತಿಷ್ಠಿತ ಹಾಗೂ ಹೈ ಪ್ರೊಫೈಲ್ ಕ್ಷೇತ್ರವಾಗಿದ್ದ ಚನ್ನಪಟ್ಟಣದಲ್ಲಿ ಕೇಂದ್ರ ಸಚಿವರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು.

    ಅತ್ತ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್ ಬಿಜೆಪಿ ಅಭ್ಯರ್ಥಿಯಾಗಿದ್ದರು. ಆರಂಭಿಕವಾಗಿ ಈ ಇಬ್ಬರು ಗೆಲುವು ಸಾಧಿಸುವ ಮೂಲಕ ಕುಟುಂಬ ರಾಜಕಾರಣಕ್ಕೆ ಹಿನ್ನಡೆಯಾಗಿದೆ.

    ಆದರೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಂಸದ ಇ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಗೆಲುವು ಸಾಧಿಸುವ ಮೂಲಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಚನ್ನಪಟ್ಟಣದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿಯಿಂದ ವಲಸೆ ಬಂದ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದರೆ ಶಿಗ್ಗಾಂವಿಯಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಕಾಂಗ್ರೆಸ್‍ನ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಹತ್ತಿಕ್ಕಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading