ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್, ಸಂಡೂರು ಕ್ಷೇತ್ರದಲ್ಲಿ ಅನ್ನಪೂರ್ಣ ತುಕಾರಾಂ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಯಾಸೀರ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ.
ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ತಮ್ಮ ಎಕ್ಸ್ ಖಾತೆಗಳಲ್ಲಿ ಬರೆದುಕೊಂಡಿದ್ದು, ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ ಹಾಗೂ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.
ಡಿಕೆ ಶಿವಕುಮಾರ್ ಪೋಸ್ಟ್: “ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು,ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು” ಎಂದು ಬರೆದುಕೊಂಡಿದ್ದಾರೆ.
ಡಿಕೆ ಸುರೇಶ್ ಪೋಸ್ಟ್: “ಕಾಂಗ್ರೆಸ್’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆಗೆ ಧನ್ಯವಾದ! ಉಪ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಶ್ರೀ ಸಿ.ಪಿ ಯೋಗೇಶ್ವರ್ , ಶ್ರೀಮತಿ ಅನ್ನಪೂರ್ಣ ತುಕಾರಾಂ, ಶ್ರೀ ಯಾಸೀರ್ ಪಠಾಣ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮೂವರು ಶಾಸಕರಾಗಿ ಉತ್ತಮ ಜನಸೇವೆ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದು ನಾನು ಬಲವಾಗಿ ನಂಬಿದ್ದೇನೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ” ಎಂದು ಬರೆದುಕೊಂಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


