ಬೆಂಗಳೂರು: ಇಂದು ( ನವೆಂಬರ್ 23 ) ರಾಜ್ಯದ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಈ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸಂಡೂರು ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವನ್ನು ದಾಖಲಿಸಿದ್ದಾರೆ.
ಅತ್ತ ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಲ್ಲೂ ಸಹ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮುಖಭಂಗ ಅನುಭವಿಸಿವೆ.
ಈ ಸೋಲಿನ ಕುರಿತು ಸದ್ಯ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದೇ ಸೋಲಿಗೆ ಕಾರಣ ಎಂದಿದ್ದಾರೆ. ನಾವು ಒಂದು ವರ್ಷ, ಆರು ತಿಂಗಳಿಂದಲೇ ಅಭ್ಯರ್ಥಿ ತಯಾರು ಮಾಡಿ ಬಿಟ್ಟಿದ್ದರೆ ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿತ್ತು ನಾವು ಕೊನೆಯ ಹಂತದಲ್ಲಿ ಚುನಾವಣೆ ಘೋಷಣೆ ಆದಮೇಲೆ ಅಭ್ಯರ್ಥಿ ತಯಾರು ಮಾಡಿದ್ದು ಕೂಡಾ ಹಿನ್ನೆಡೆ ಆಯ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕೊನೆಯವರೆಗೂ ನಾವು ಅಭ್ಯರ್ಥಿ ಘೋಷಿಸಿರಲಿಲ್ಲ. ಬೇಗ ಅಭ್ಯರ್ಥಿ ಘೋಷಣೆ ಮಾಡಿದ್ದು ಕಾಂಗ್ರೆಸ್ಗೆ ಪ್ಲಸ್ ಪಾಯಿಂಟ್ ಆಗಿದೆ. ರಾಜೀನಾಮೆ ಕೊಟ್ಟ ಕೂಡಲೇ ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ್ದರೆ ಗೆಲುವು ಆಗುತ್ತಿತ್ತು ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


