Friday, November 6, 2026
spot_img
More
    spot_img
    HomeStateಉಪಚುನಾವಣೆ ಗೆಲುವು: ಕಾಂಗ್ರೆಸ್‌ ಜನಸ್ನೇಹಿ ಆಡಳಿತಕ್ಕೆ ಸಿಕ್ಕ ಉಡುಗೊರೆ: ಸಂತೋಷ್‌ ಲಾಡ್‌

    ಉಪಚುನಾವಣೆ ಗೆಲುವು: ಕಾಂಗ್ರೆಸ್‌ ಜನಸ್ನೇಹಿ ಆಡಳಿತಕ್ಕೆ ಸಿಕ್ಕ ಉಡುಗೊರೆ: ಸಂತೋಷ್‌ ಲಾಡ್‌

    ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

    ಚನ್ನಪಟ್ಟಣ ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್‌, ಸಂಡೂರು ಕ್ಷೇತ್ರದಲ್ಲಿ ಅನ್ನಪೂರ್ಣ ತುಕಾರಾಂ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಯಾಸೀರ್‌ ಖಾನ್‌ ಪಠಾಣ್‌ ಗೆಲುವು ದಾಖಲಿಸಿದ್ದಾರೆ.

    ಈ ಕುರಿತು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪ್ರತಿಕ್ರಿಯಿಸಿದ್ದು, ಈ ಗೆಲುವು ಕಾಂಗ್ರೆಸ್‌ ಸರ್ಕಾರದ ಜನಸ್ನೇಹಿ ಆಡಳಿತಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡು ಜನತೆಗೆ ಧನ್ಯವಾದ ತಿಳಿಸಿದ್ದಾರೆ ಹಾಗೂ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    “ಕರ್ನಾಟಕ ಉಪಚುನಾವಣೆಯಲ್ಲಿ ನಡೆದ ಸಂಡೂರು, ಶಿಗ್ಗಾಂವಿ-ಸವಣೂರು ಹಾಗೂ ಚನ್ನಪಟ್ಟಣ ಚುನಾವಣೆಗಳಲ್ಲಿ ಭರ್ಜರಿ ಜನಾದೇಶ ಪಡೆದು ಗೆಲುವು ಸಾಧಿಸಿದ ನಮ್ಮ ಕಾಂಗ್ರೆಸ್ ಪಕ್ಷದ ಶ್ರೀಮತಿ ಅನ್ನಪೂರ್ಣ ತುಕಾರಾಮ್, ಶ್ರೀ ಯಾಸೀರ್ ಅಹ್ಮದ್ ಖಾನ್ ಪಠಾಣ್ ಹಾಗೂ ಶ್ರೀ ಸಿ ಪಿ ಯೋಗೇಶ್ವರ್ ಅವರಿಗೆ ಅಭಿನಂದನೆಗಳು. ಈ ಅಭೂತಪೂರ್ವ ಗೆಲುವಿಗೆ ಕಾರಣರಾದ ‌ನಮ್ಮ ಪಕ್ಷದ ಎಲ್ಲ ನಾಯಕರಿಗೆ, ಮುಖಂಡರಿಗೆ ಹಾಗೂ ನನ್ನ ನೆಚ್ಚಿನ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಕಾಂಗ್ರೆಸ್ ಸರ್ಕಾರದ ಜನಸ್ನೇಹಿ ಆಡಳಿತಕ್ಕೆ ಗೆಲುವಿನ ಉಡುಗೊರೆ ಕೊಟ್ಟ ಸಂಡೂರು, ಶಿಗ್ಗಾಂವಿ-ಸವಣೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಸಮಸ್ತ ಜನತೆಗೆ ನಾನು ಚಿರಋಣಿ” ಎಂದು ಸಂತೋಷ್‌ ಲಾಡ್‌ ಬರೆದುಕೊಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search