ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರದ ಬಿಡುಗಡೆಯ ವೇಳೆ ಆಯೋಜಿಸಲಾಗಿದ್ದ ಪ್ರೀಮಿಯರ್ ಶೋ ಸಮಯದಲ್ಲಿ ಉಂಟಾಗಿದ್ದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು. ಈ ವಿಚಾರವಾಗಿ ಅಲ್ಲು ಅರ್ಜುನ್ ಬಂಧನವಾಗಿ ಬಿಡುಗಡೆ ಆದಾಗಿನಿಂದ ಅಲ್ಲು ಅರ್ಜುನ್ ಸಾಕಷ್ಟು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.
ಪೊಲೀಸ್ ಠಾಣೆಯಿಂದ ಬಿಡುಗಡೆಗೊಂಡ ನಂತರ ರೇವತಿ ಕುಟುಂಬಕ್ಕೆ ತಾನು ಸಹಾಯ ಮಾಡುತ್ತೇನೆ ಎಂದು ಸಹ ಅಲ್ಲು ಅರ್ಜುನ್ ಹೇಳಿಕೊಂಡಿದ್ದರು. ಪತ್ರಿಕಾಗೋಷ್ಠಿಗಳನ್ನು ನಡೆಸಿ ನನ್ನದೇನು ತಪ್ಪಿಲ್ಲ ಎಂದು ಸಹ ಅಲ್ಲು ಅರ್ಜುನ್ ಸ್ಪಷ್ಟನೆ ನೀಡಲು ಮುಂದಾಗಿದ್ದರು.
ಇಷ್ಟೆಲ್ಲ ಬೆಳವಣಿಗೆಗಳು ನಡೆದ ನಂತರ ಇದೀಗ ವಿದ್ಯಾರ್ಥಿಗಳ ಗುಂಪೊಂದು ಅಲ್ಲು ಅರ್ಜುನ್ ನಿವಾಸದ ಮೇಲೆ ಕಲ್ಲುತೂರಾಟ ನಡೆಸಿದೆ. ಮೃತ ರೇವತಿ ಕುಟುಂಬಕ್ಕೆ ಅಲ್ಲು ಅರ್ಜುನ್ ಸಹಾಯಕ್ಕೆ ಬಂದಿಲ್ಲ ಎಂಬ ಕಾರಣವನ್ನು ನೀಡಿ ಉಸ್ಮನಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಅಲ್ಲು ಅರ್ಜುನ್ ನಿವಾಸದ ಮೇಲೆ ಟೊಮ್ಯಾಟೋ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ.
ಸುದ್ದಿತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಇಷ್ಟೆಲ್ಲಾ ಹೈಡ್ರಾಮಾ ನಡೆದ ನಂತರ ಪೊಲೀಸ್ ಠಾಣೆಯಲ್ಲಿ ಆ ವಿದ್ಯಾರ್ಥಿಗಳು ಕುಳಿತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಫೋಟೋದಲ್ಲಿ ವಿದ್ಯಾರ್ಥಿಗಳು ಚೇರ್ ಮೇಲೆ ಕುಳಿತು ತಮ್ಮಷ್ಟಕ್ಕೆ ತಾವು ಮೊಬೈಲ್ ಬಳಸುತ್ತಿದ್ದಾರೆ. ಈ ಫೋಟೋವನ್ನು ಹಂಚಿಕೊಂಡಿರುವ ಅಲ್ಲು ಅರ್ಜುನ್ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳಿಗೆ ಪೊಲೀಸರು ಕುರ್ಚಿ ಹಾಕಿ ಆತಿತ್ಯ ನೀಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


