Saturday, September 19, 2026
spot_img
More
    spot_img
    HomeEntertainmentಜ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ಪ್ರಕಾಶ್ ರಾಜ್ ರಾಯಭಾರಿ

    ಜ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ಪ್ರಕಾಶ್ ರಾಜ್ ರಾಯಭಾರಿ

    17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಆಯೋಜನೆ ಕುರಿತು ಸಂಘಟನಾ ಸಮಿತಿಯವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯನ್ನು ನಡೆಸಿದರು. 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29, 2026 ರಿಂದ ಫೆಬ್ರವರಿ 6ರ ತನಕ ನಡೆಯಲಿದೆ.

    Advertisement

    ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಲನಚಿತ್ರ ಅಕಾಡೆಮಿ‌ ಅಧ್ಯಕ್ಷ ಸಾಧು ಕೋಕಿಲಾ, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮುಂತಾದವರು ಉಪಸ್ಥಿತರಿದ್ದರು.

    ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ.  ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಹಿರಿಯ ನಟ, ನಿರ್ದೇಶಕ, ನಿರ್ಮಾಪಕರಾದ ಪ್ರಕಾಶ್ ರಾಜ್ 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

    ಎಷ್ಟು ಅನುದಾನ?: ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ, “2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ. ‌7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು” ಎಂದು ಹೇಳಿದರು.

    “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ” ಎಂದರು.

    “ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲೀಸ್‌ನ 11 ಸ್ಕ್ರೀನ್‌ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

    “ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31 ಕಡೆಯ ದಿನಾಂಕವಾಗಿರುತ್ತದೆ. ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ” ಎಂದರು.

    “ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ” ಎಂದು ವಿವರಣೆ ನೀಡಿದರು.

     “ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ” ಎಂದು ತಿಳಿಸಿದರು.

    “ಪೋಲಿಷ್ ಕಲ್ಪರಲ್ ಸೆಂಟರ್, ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ, ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ. ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective), ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ” ಎಂದು ವಿವರಣೆ ನೀಡಿದರು.

    “ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ. ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ” ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading