Tuesday, August 4, 2026
spot_img
More
    spot_img
    HomeJobsಆರೋಗ್ಯ ಇಲಾಖೆಯಲ್ಲಿ `877’ ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ಸಿಕ್ತು ಸರ್ಕಾರದ ಗ್ರೀನ್ ಸಿಗ್ನಲ್.

    ಆರೋಗ್ಯ ಇಲಾಖೆಯಲ್ಲಿ `877’ ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ಸಿಕ್ತು ಸರ್ಕಾರದ ಗ್ರೀನ್ ಸಿಗ್ನಲ್.

    ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕಲ್ಯಾಣ ಕರ್ನಾಟಕ (371ಜೆ) ವೃಂದದಲ್ಲಿ ಖಾಲಿ ಇರುವ 877 ವಿವಿಧ ಅರೆ ವೈದ್ಯಕೀಯ (Para Medical) ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಕೊನೆಗೂ ‘ಗ್ರೀನ್ ಸಿಗ್ನಲ್’ ನೀಡಿದೆ.

    Advertisement

    ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರಂಭದಲ್ಲಿ ಆರ್ಥಿಕ ಇಲಾಖೆಯಿಂದ ತಾಂತ್ರಿಕ ಕಾರಣಗಳಿಗಾಗಿ ಅಡೆತಡೆಗಳು ಎದುರಾಗಿದ್ದವು. ಆದರೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ವಿಶೇಷ ನಿಯಮದನ್ವಯ, ಮುಖ್ಯ ಕಾರ್ಯದರ್ಶಿಯವರ ಅನುಮೋದನೆಯೊಂದಿಗೆ ಈ ನೇಮಕಾತಿಗೆ ಚಾಲನೆ ನೀಡಲಾಗಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಕರ್ನಾಟಕ (371ಜೆ) ವೃಂದದಲ್ಲಿ ಖಾಲಿ ಇರುವ 877 ವಿವಿಧ ಅರೆ ವೈದ್ಯಕೀಯ (Para Medical) ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ. ಆರ್ಥಿಕ ಇಲಾಖೆಯ ಅಡೆತಡೆಗಳನ್ನು ದಾಟಿ, ಮುಖ್ಯ ಕಾರ್ಯದರ್ಶಿಯವರ ವಿಶೇಷ ಅನುಮೋದನೆಯೊಂದಿಗೆ ಈ ನೇಮಕಾತಿ ಪ್ರಕ್ರಿಯೆಗೆ ಈಗ ಚಾಲನೆ ಸಿಕ್ಕಿದೆ.

    ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ (ಬೀದರ್, ಕಲ್ಬುರ್ಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರ) ಯುವಜನತೆಗೆ ಇದು ಸುವರ್ಣ ಅವಕಾಶ. ಸ್ಥಳೀಯರಿಗೆ ಮೀಸಲಾದ ಈ ಹುದ್ದೆಗಳು ಆ ಭಾಗದ ಆರೋಗ್ಯ ಸೇವೆಯನ್ನು ಬಲಪಡಿಸಲಿವೆ.

    ಯಾವ ಇಲಾಖೆ? ಎಷ್ಟು ಹುದ್ದೆ?

    ಇಲಾಖೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.

    ಹುದ್ದೆಗಳ ಸಂಖ್ಯೆ: 877 (ಅರೆ ವೈದ್ಯಕೀಯ ವೃಂದ).

    ವಲಯ: ಕಲ್ಯಾಣ ಕರ್ನಾಟಕ ವೃಂದ (ಹೈದರಾಬಾದ್-ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ).

    ನೇಮಕಾತಿ ವಿಧಾನ: ನೇರ ನೇಮಕಾತಿ (Direct Recruitment).

    ಅರೆ ಅದರನ್ವಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ವೈದ್ಯಕೀಯ ಹುದ್ದೆಗಳನ್ನು ನೇರನೇಮಕಾತಿಯಿಂದ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡದಿರುವ ಹಿನ್ನೆಲೆಯಲ್ಲಿ Q : DPAR 6 PLX 2012, ໖: 06.11.2013 2 2 10(2) ಇಲಾಖೆಯ ಸಹಮತಿಯಿದೆ ಎಂದು ಪರಿಭಾವಿಸಿ ಸದರಿ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರನೇಮಕಾತಿಯಿಂದ ಭರ್ತಿ ಮಾಡಲು ಕ್ರಮ ಕೈಗೊಳ್ಳಬಹುದೇ ಎಂಬ ಬಗ್ಗೆ ಸಿಆಸು ಇಲಾಖೆಯ ಅಭಿಪ್ರಾಯವನ್ನು ಕೋರಲಾಗಿತ್ತು.

    ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಸೇವಾ ನಿಯಮಗಳು) ಟಿಪ್ಪಣಿಯ ಸಂಖ್ಯೆ: ಸಿಆಸುಇ 38 ಹೆಚ್‌ಪಿ 2025, ದಿನಾಂಕ: 18/10/2025 ರಲ್ಲಿ ಆರ್ಥಿಕ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಸಹಮತಿ ನೀಡದಿರುವ ಹಿನ್ನೆಲೆಯಲ್ಲಿ ಅಧಿಸೂಚನೆ ಸಂಖ್ಯೆ: DPAR 06 PLX 2012, ದಿನಾಂಕ: 06.11.2013ರ ನಿಯಮ 10(2) ರನ್ವಯ ಆರ್ಥಿಕ ಇಲಾಖೆಯ ಸಹಮತಿ ಇದೆ ಎಂದು ಪರಿಭಾವಿಸಿ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮಾಡಲು ಮುಖ್ಯ ಕಾರ್ಯದರ್ಶಿಯವರ ಅನುಮೋದನೆಯೊಂದಿಗೆ ಸೂಚಿಸಿರುತ್ತದೆ.

    ಜನವರಿ 1ರೊಳಗೆ ನೀವು ಮಾಡಲೇಬೇಕಾದ 5 ಪ್ರಮುಖ ಕೆಲಸಗಳಿವು;ಇಂದೇ ಈ ಕೆಲಸ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading