ರಾವಲ್ಪಿಂಡಿ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಲೀಗ್ ಹಂತದ ಆರನೇ ಪಂದ್ಯ ಇಂದು (ಫೆಬ್ರವರಿ 24) ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಎ ಗುಂಪಿನ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.
ಇನ್ನು ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಫೀಲ್ಡಿಂಗ್ ಆರಿಸಿಕೊಂಡಿದ್ದು, ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಬ್ಯಾಟಿಂಗ್ ಆರಂಭಿಸಿರುವ ಬಾಂಗ್ಲಾದೇಶ 10 ಓವರ್‌ಗೆ 1 ವಿಕೆಟ್ ನಷ್ಟಕ್ಕೆ 58 ರನ್ ಕಲೆಹಾಕಿದೆ.
ಇನ್ನು ಈ ಪಂದ್ಯ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ಎರಡೂ ತಂಡಗಳಿಗೂ ಮುಖ್ಯವಾಗಿದ್ದು, ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋತರೆ ಟೂರ್ನಿಯಿಂದಲೇ ಹೊರಬೀಳಲಿದೆ. ಬಾಂಗ್ಲಾದೇಶ ಮಾತ್ರವಲ್ಲದೇ ಪಾಕಿಸ್ತಾನ ಸಹ ಹೊರಬೀಳಲಿದೆ. ಪಾಕ್ ಆಡಿರುವ ತನ್ನೆರಡೂ ಪಂದ್ಯಗಳಲ್ಲಿಯೂ ಸೋತಿದೆ. ಭಾರತದ ವಿರುದ್ಧ ಈಗಾಗಲೇ ಒಂದು ಪಂದ್ಯ ಸೋತಿರುವ ಬಾಂಗ್ಲಾಗೆ ಈ ಪಂದ್ಯದಲ್ಲಿ ಸೋತರೆ ಎರಡನೇ ಸೋಲಾಗಲಿದ್ದು, ಸೆಮಿಫೈನಲ್ ಅರ್ಹತೆ ಕಳೆದುಕೊಳ್ಳಲಿದೆ.
ಅತ್ತ ಈ ಹಿಂದೆ ಪಾಕಿಸ್ತಾನದ ವಿರುದ್ಧ ಗೆದ್ದಿರುವ ನ್ಯೂಜಿಲೆಂಡ್ ಈ ಪಂದ್ಯದಲ್ಲಿಯೂ ಗೆದ್ದರೆ ಎರಡು ಪಂದ್ಯಗಳನ್ನು ಗೆದ್ದಂತಾಗಲಿದ್ದು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಜತೆಗೆ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಸಹ ಸೆಮಿಫೈನಲ್ ಪ್ರವೇಶಿಸಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


