Monday, November 2, 2026
spot_img
More
    spot_img
    HomeTop StoryChampions Trophy 2025: ಭಾರತ vs ಪಾಕ್ ಪಂದ್ಯ ಮುಗಿದರೂ ಸೆಮಿಫೈನಲ್ ತಲುಪದ ಭಾರತ, ಎಲಿಮಿನೇಟ್...

    Champions Trophy 2025: ಭಾರತ vs ಪಾಕ್ ಪಂದ್ಯ ಮುಗಿದರೂ ಸೆಮಿಫೈನಲ್ ತಲುಪದ ಭಾರತ, ಎಲಿಮಿನೇಟ್ ಆಗದ ಪಾಕ್; ಕಾರಣವೇನು?

    ಬೆಂಗಳೂರು: 2025ರ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯ ನಿನ್ನೆ (ಫೆಬ್ರವರಿ 23) ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ನಡೆಯಿತು. ಟೀಮ್ ಇಂಡಿಯಾ 6 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ತನ್ನ ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಸುಗಮ ಮಾಡಿಕೊಂಡಿದೆ.

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್‌ಔಟ್ ಆಗಿ ಭಾರತಕ್ಕೆ 242 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ವಿರಾಟ್ ಕೊಹ್ಲಿ ಶತಕದ ನೆರವಿನಿಂದ 42.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 244 ರನ್‌ ಕಲೆಹಾಕಿತು.

    ಈ ಪಂದ್ಯದಲ್ಲಿ ಸೋಲುವ ಮೂಲಕ ಪಾಕಿಸ್ತಾನ ಸೆಮಿಫೈನಲ್‌ಗೆ ಪ್ರವೇಶಿಸಲು ತನಗಿದ್ದ ಎಲ್ಲಾ ಅವಕಾಶಗಳನ್ನೂ ಸಹ ಕಳೆದುಕೊಂಡಿದೆ. ಹೌದು, ಗ್ರೂಪ್ ಹಂತದ ಮೂರು ಪಂದ್ಯಗಳ ಪೈಕಿ ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳ ವಿರುದ್ಧ ಸೋತಿರುವ ಪಾಕ್‌ ಬಾಂಗ್ಲಾದೇಶದ ವಿರುದ್ಧ ಇನ್ನೊಂದು ಪಂದ್ಯವನ್ನಾಡಲಿದೆ. ಇನ್ನು ಭಾರತ ಆಡಿರುವ ತನ್ನೆರಡು ಪಂದ್ಯಗಳಲ್ಲಿಯೂ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

    ಹೀಗೆ ಎರಡು ಪಂದ್ಯಗಳನ್ನು ಸೋತಿರುವ ಪಾಕ್ ಇನ್ನೂ ಸಹ ಎಲಿಮಿನೇಟ್ ಆಗದೇ ಇರುವುದಕ್ಕೆ ಹಾಗೂ ಭಾರತ ಎರಡು ಪಂದ್ಯಗಳಲ್ಲಿ ಗೆದ್ದಿದ್ದರೂ ಸೆಮಿಫೈನಲ್ ತಲುಪದಿರಲು ಕಾರಣ ಇಂದು (ಫೆಬ್ರವರಿ 24) ನಡೆಯಲಿರುವ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯ. ಹೌದು, ಈ ಪಂದ್ಯದ ಫಲಿತಾಂಶದ ಮೇಲೆ ಪಾಕ್ ಎಲಿಮಿನೇಷನ್ ಹಾಗೂ ಟೀಮ್ ಇಂಡಿಯಾ ಸೆಮಿಫೈನಲ್ ಎಂಟ್ರಿ ನಿರ್ಧಾರವಾಗಲಿದೆ.

    ನ್ಯೂಜಿಲೆಂಡ್ ಗೆದ್ದರೆ ನ್ಯೂಜಿಲೆಂಡ್ ಹಾಗೂ ಭಾರತ ಎರಡೂ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಅದೇ ರೀತಿ ಪಾಕ್ ಹಾಗೂ ಬಾಂಗ್ಲಾದೇಶ ತಂಡಗಳೆರಡು ಟೂರ್ನಿಯಿಂದ ಹೊರಬೀಳಲಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search