Tuesday, August 11, 2026
spot_img
More
    spot_img
    HomeChampions Trophy 2025Champions Trophy 2025: ಕೊಹ್ಲಿ ಸೆಂಚುರಿಗೆ ಸುರೇಶ್ ರೈನಾ ಶಿಳ್ಳೆ; ವಿಡಿಯೊ ವೈರಲ್

    Champions Trophy 2025: ಕೊಹ್ಲಿ ಸೆಂಚುರಿಗೆ ಸುರೇಶ್ ರೈನಾ ಶಿಳ್ಳೆ; ವಿಡಿಯೊ ವೈರಲ್

    ದುಬೈ: ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ (ಫೆಬ್ರವರಿ 23) ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಐದನೇ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

    Advertisement

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್‌ಔಟ್ ಆಗಿ ಭಾರತಕ್ಕೆ 242 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಭಾರತ ವಿರಾಟ್ ಕೊಹ್ಲಿ ಶತಕದ ನೆರವಿನಿಂದ 42.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 244 ರನ್‌ ಬಾರಿಸಿತು.

    ಈ ಗೆಲುವಿನೊಂದಿಗೆ ಭಾರತ ಸೆಮಿಫೈನಲ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡರೆ, ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದ 82ನೇ ಅಂತರರಾಷ್ಟ್ರೀಯ ಶತಕವನ್ನು ಬಾರಿಸಿದರು. ಕೊಹ್ಲಿ ಶತಕವನ್ನು ಪಾಕ್ ಗೆಲುವಿನಷ್ಟೇ ದೊಡ್ಡ ಮಟ್ಟದಲ್ಲಿ ಎಲ್ಲೆಡೆ ಸಂಭ್ರಮಿಸಲಾಯಿತು.

    ದೇಶದ ವಿವಿಧೆಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ. ದೇಶದಲ್ಲಿ ಮಾತ್ರವಲ್ಲದೇ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲೂ ಸಹ ಕೊಹ್ಲಿ ಸೆಂಚುರಿಯನ್ನು ಯುವಕ – ಯುವತಿಯರು ಸಂಭ್ರಮಿಸಿದ್ದಾರೆ. ಇನ್ನು ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಪಂದ್ಯದ ಕುರಿತಾಗಿ ನಡೆಯುತ್ತಿದ್ದ ಕಾಮೆಂಟರಿ ಕಾರ್ಯಕ್ರಮವೊಂದರಲ್ಲಿ ನಿರತರಾಗಿದ್ದರೂ ಸಹ ಆ ಸ್ಥಳದಲ್ಲೇ ಕುಳಿತು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading