ಬೆಳಗಾವಿ: ಕರ್ನಾಟಕದ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಭೇಟಿ ನೀಡಿದ್ದ ಸಚಿವರು ಹಲ್ಲೆಗೊಳಗಾದ ಕಂಡಕ್ಟರ್ ಅವರ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂಡಕ್ಟರ್ ಆರೋಗ್ಯ ಈಗ ಸ್ಥಿರವಾಗಿದೆ. ಎರಡು ದಿನಗಳಲ್ಲಿ ಮನೆಗೆ ಕಳುಹಿಸುತ್ತಾರೆ. ನಮ್ಮ ಎಂಡಿ ಅವರು ಪ್ರತಿದಿನ ಬಂದು ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಗಲಾಟೆಯಾದ ಬಳಿಕ ಕೇಸ್ ಕೊಟ್ಟಿದ್ದಕ್ಕೆ ಗಾಬರಿಯಾಗಿದ್ದಾರೆ. ಏನೇ ಕೇಸ್ ಮಾಡಲು ತನಿಖೆ ಮಾಡುತ್ತಾರೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿ ಅವರು ಉದ್ದೇಶಪೂರ್ವಕವಾಗಿಯೇ ಕೇಸ್ ಕೊಟ್ಟಿದ್ದಾರೆ. ನಾನು ಗೃಹಮಂತ್ರಿಗಳ ಜೊತೆಗೆ ಮಾತನಾಡುತ್ತೇನೆ. ಮಹದೇವಪ್ಪ ಪರವಾಗಿ ನಮ್ಮ ಇಲಾಖೆ ಇದೆ. ಸಾರ್ವಜನಿಕರೂ ಸಹ ಇದ್ದಾರೆ. ಬೆಳಗಾವಿಯಲ್ಲಿ ಎಂಇಎಸ್‌ನವರು ಗೂಂಡಾಗಿರಿ ಮಾಡುವವರಿಗೆ ಬೆಂಬಲ ಕೊಟ್ಟರೆ ನಾವು ಕೇಸ್ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


