ಬೆಂಗಳೂರು: ಏಷ್ಯಾದ ವಿವಿಧ ದೇಶಗಳಲ್ಲಿ ಮತ್ತೆ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಬೆಂಗಳೂರೊಂದರಲ್ಲೇ 32 ಸಕ್ರಿಯ ಪ್ರಕರಣಗಳಿವೆ.
ಹೀಗಾಗಿ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಗರ್ಭಿಣಿಯರು ಹಾಗೂ ಮಕ್ಕಳು ಮಾಸ್ಕ್ ಧರಿಸಿ ಎಂದು ಸೂಚಿಸಿದೆ. ಅಲ್ಲದೇ ರೋಗ ನಿರೋಧಕ ಶಕ್ತಿಗಳು ಕಡಿಮೆ ಇರುವವರೂ ಸಹ ಮಾಸ್ಕ್ ಧರಿಸುವುದು ಉತ್ತಮ ಎಂದು ಆರೋಗ್ಯ ಇಲಾಕೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಈ ಮೂಲಕ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವನ್ನು ಆರೋಗ್ಯ ಇಲಾಖೆ ತೆಗೆದುಕೊಂಡಿದೆ. ಇನ್ನು ನಗರದಲ್ಲಿ 32 ಸಕ್ರಿಯ ಪ್ರಕರಣಗಳಿದ್ದರೆ, ರಾಜ್ಯಾದ್ಯಂತ ಒಟ್ಟು 35 ಸಕ್ರಿಯ ಕೊವಿಡ್ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಒಂಬತ್ತು ತಿಂಗಳ ಮಗುವಿನಲ್ಲೂ ಸಹ ಕೊರೊನಾ ಕಾಣಿಸಿಕೊಂಡಿದ್ದು, ಆತಂಕವನ್ನು ಹೆಚ್ಚಿಸಿದೆ.
ಸದ್ಯ ಆರೋಗ್ಯ ಇಲಾಖೆಯ ಈ ಕ್ರಮ ಪ್ರಾಥಮಿಕ ಮುನ್ನೆಚ್ಚರಿಕಾ ಕ್ರಮವಾಗಿದ್ದು, ಜನ ಸಾಮಾನ್ಯರು ಮಾಸ್ಕ್ ಧರಿಸಿ ಎಂದ ಕೂಡಲೇ ಕೊರೊನಾ ಹರಡುವಿಕೆ ಜೋರಾಗಿದೆ ಎಂದು ಆತಂಕಪಡುವ ಅಗತ್ಯವಿಲ್ಲ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


