Wednesday, November 4, 2026
spot_img
More
    spot_img
    HomeTop Storyಬೆಳಗಾವಿಯಲ್ಲೊಬ್ಬ ಕಾಮಿ ಸ್ವಾಮಿ; ಮಠದಲ್ಲಿ ಪೋಷಕರು ಬಿಟ್ಟು ಹೋದ ಅಪ್ರಾಪ್ತ ಬಾಲಕಿ ಮೇಲೆ ಸ್ವಾಮೀಜಿ ಅತ್ಯಾಚಾರ!

    ಬೆಳಗಾವಿಯಲ್ಲೊಬ್ಬ ಕಾಮಿ ಸ್ವಾಮಿ; ಮಠದಲ್ಲಿ ಪೋಷಕರು ಬಿಟ್ಟು ಹೋದ ಅಪ್ರಾಪ್ತ ಬಾಲಕಿ ಮೇಲೆ ಸ್ವಾಮೀಜಿ ಅತ್ಯಾಚಾರ!

    ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ರಾಮಮಂದಿರದ ಸ್ವಾಮೀಜಿಯಾದ ಲೋಕೇಶ್ವರ ಸ್ವಾಮೀಜಿ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದಾರೆ.

    ಬಾಲಕಿಗೆ ಆರಾಮಿಲ್ಲದ ಕಾರಣ ಮಠದಲ್ಲಿ ಬಾಲಕಿಯನ್ನು ಪೋಷಕರು ಎಂದಿನಂತೆ ಬಿಟ್ಟುಹೋಗಿದ್ದರು. ಈ ವೇಳೆ ಮೇ 13ರಂದು ಬಾಲಕಿಯನ್ನು ವಾಪಸ್‌ ಮನೆಗೆ ಬಿಡುವುದಾಗಿ ಕರೆದುಕೊಂಡು ಹೊರಟ ಲೋಕೇಶ್ವರ ಸ್ವಾಮೀಜಿ ಮೇ 13 ಹಾಗೂ ಮೇ 14ರಂದು ರಾಯಚೂರಿನಲ್ಲಿ ವಾಸ್ತವ್ಯ ಹೂಡಿ ಬಳಿಕ ಮೇ 15ರಂದು ಬಾಗಲಕೋಟೆಯಲ್ಲಿ ರಾತ್ರಿ ಕಳೆದಿದ್ದ.

    ಈ ಎರಡೂ ಕಡೆ ವಾಸ್ತವ್ಯ ಹೂಡಿದ್ದಾಗಲೂ ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿ ಆರೋಪಿಸಿದ್ದು, ವಿಷಯವನ್ನು ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ.

    ಬಾಗಲಕೋಟೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಪೊಲೀಸರು ಮೂಡಲಗಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದರು. ಅದರಂತೆ ಇದೀಗ ಪೊಕ್ಸೊ ಪ್ರಕರಣದಡಿಯಲ್ಲಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search