Saturday, September 26, 2026
spot_img
More
    spot_img
    HomeEntertainmentವಿಜಯ್ ದೇವರಕೊಂಡ ವಿರುದ್ಧ SC/ST ಕಾಯ್ದೆಯಡಿ ಕೇಸ್ ದಾಖಲು

    ವಿಜಯ್ ದೇವರಕೊಂಡ ವಿರುದ್ಧ SC/ST ಕಾಯ್ದೆಯಡಿ ಕೇಸ್ ದಾಖಲು

    ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ದೇವರಕೊಂಡ (Vijay Deverakonda) ಅವರು ತಮ್ಮ ಚಲನಚಿತ್ರಗಳು ಮತ್ತು ವೈಯಕ್ತಿಕ ಜೀವನದ ಕಾರಣದಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಈ ನಡುವೆ ಕಳೆದ ಕೆಲವು ದಿನಗಳಿಂದ, ವಿಜಯ್ ದೇವರಕೊಂಡ ಅವರು ತಮ್ಮ ಒಂದು ಹೇಳಿಕೆಯಿಂದ ಸುದ್ದಿಯಲ್ಲಿದ್ದಾರೆ. ಬುಡಕಟ್ಟು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಇದೀಗ ಇವರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ.ಈ ಸಂಬಂಧ ಸೈಬರಾಬಾದ್‌ನ ರಾಯದುರ್ಗಂ ಪೊಲೀಸರು FIR ದಾಖಲಿಸಿ ತನಿಖೆ ಆರಂಭಿಸಿದ್ದಾರೆ.ದೂರುದಾರರಾಗಿರುವವರು ಸೈದಾಬಾದ್ ನಿವಾಸಿ ಹಾಗೂ ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷರಾದ ನೆನವತ್ ಅಶೋಕ್ ಕುಮಾರ್ ನಾಯಕ್. ಅವರು ನೀಡಿದ ದೂರಿನ ಆಧಾರದ ಮೇಲೆ ವಿಜಯ್ ದೇವರಕೊಂಡ ವಿರುದ್ಧ ಕಾನೂನು ಕ್ರಮ ಆರಂಭವಾಗಿದೆ.

    ವಿವಾದಾತ್ಮಕ ಹೇಳಿಕೆ ಏನು?

    ಈ ಘಟನೆ ಹೈದರಾಬಾದ್‌ನಲ್ಲಿನ ‘ರೆಟ್ರೋ’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಏಪ್ರಿಲ್ 26ರಂದು ನಡೆದಿದೆ. ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ, ಪಾಕಿಸ್ತಾನಿಗಳನ್ನು 500 ವರ್ಷಗಳ ಹಿಂದಿನ ಬುಡಕಟ್ಟು ಸಮುದಾಯದವರಂತೆ, “ಸಾಮಾನ್ಯ ಬುದ್ಧಿಯಿಲ್ಲದೆ ಹೋರಾಡಿದವರು” ಎಂದು ಹೋಲಿಕೆ ಮಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಬುಡಕಟ್ಟು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂಬ ಆರೋಪ ಕೇಳಿಬಂದಿದೆ.ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನಾವತ್ ಅಶೋಕ್ ಕುಮಾರ್ ನಾಯ್ಕ್ ಅಲಿಯಾಸ್ ಅಶೋಕ್ ರಾಥೋಡ್ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ಈ ದೂರಿನ ಆಧಾರದ ಮೇಲೆ ಜೂನ್ 17ರಂದು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ವಿಜಯ್ ದೇವರಕೊಂಡ ವಿರುದ್ಧ ಪ್ರಕರಣ ದಾಖಲಾಗಿದೆ ಮತ್ತು ತನಿಖೆ ಆರಂಭವಾಗಿದೆ.

    ಕ್ಷಮೆ ಕೇಳಿದ್ದ ನಟ ವಿಜಯ್ದೇವರಕೊಂಡ ಈ ವಿವಾದಕ್ಕೆ ಪ್ರತಿಕ್ರಿಯಿಸಿ ಹೀಗೆ ಹೇಳಿದ್ದಾರೆ:

    ನನ್ನ ಪ್ರೀತಿಯ ಸಹೋದರರಿಗೆ, ರೆಟ್ರೋ ಆಡಿಯೋ ಬಿಡುಗಡೆ ಕಾರ್ಯಕ್ರಮದ ಸಂದರ್ಭ ನಾನು ನೀಡಿದ್ದ ಒಂದು ಹೇಳಿಕೆ ಕೆಲವರಲ್ಲಿ ಕಳವಳ ಉಂಟುಮಾಡಿದೆ ಎಂಬುದು ನನ್ನ ಅರಿವಿಗೆ ಬಂದಿದೆ. ನಾನು ಪ್ರಾಮಾಣಿಕವಾಗಿ ಸ್ಪಷ್ಟಪಡಿಸಲು ಬಯಸುವುದೇನೆಂದರೆ ಯಾವುದೇ ಸಮುದಾಯವನ್ನು, ವಿಶೇಷವಾಗಿ ನಮ್ಮ ಪರಿಶಿಷ್ಟ ಪಂಗಡಗಳನ್ನು ನೋಯಿಸುವ ಅಥವಾ ಗುರಿಯಾಗಿಸುವ ಯಾವುದೇ ಉದ್ದೇಶ ನನಗಿರಲಿಲ್ಲ. ಅವರನ್ನು ನಾನು ಅಪಾರವಾಗಿ ಗೌರವಿಸುತ್ತೇನೆ ಮತ್ತು ನಮ್ಮ ದೇಶದ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತೇನೆ” ಎಂದು ಸ್ಪಷ್ಟನೆ ನೀಡಿದ್ದಾರೆ.ನನ್ನ ಸಂದೇಶದ ಯಾವುದೇ ಭಾಗವು ತಪ್ಪಾಗಿ ಅರ್ಥೈಸಲ್ಪಟ್ಟಿದ್ದರೆ ಅಥವಾ ಯಾರಾದರೂ ನೋವು ಅನುಭವಿಸಿದ್ದರೆ, ನಾನು ನನ್ನ ಪ್ರಾಮಾಣಿಕ ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಶಾಂತಿ, ಪ್ರಗತಿ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವುದು ನನ್ನ ಏಕೈಕ ಗುರಿಯಾಗಿತ್ತು.

    ಒಂದೇ ರಸ್ತೆಯಲ್ಲಿದ್ದರೂ ನಾನು ದರ್ಶನ್‌ ಸರ್‌ ಮನೆಗೆ ಹೋಗಿಲ್ಲ: ನಾಗಶೇಖರ್‌

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading