ಲೀಡ್ಸ್: ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ( india vs england ) ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪ್ರಥಮ ಪಂದ್ಯದ ಕೊನೆಯ ದಿನದಾಟ ಇಂದು ( ಜೂನ್ 24 ) ಆರಂಭಗೊಂಡಿದೆ.
ಭಾರತ ನೀಡಿರುವ 371 ರನ್‌ಗಳ ಗುರಿಯನ್ನು ಬೆನ್ನಟ್ಟಿರುವ ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಮಾಡಿದ್ದು, ಗೆಲುವಿನತ್ತ ದಾಪುಗಾಲಿಟ್ಟಿದೆ. ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಬೆನ್ ಡಕೆಟ್ ಶತಕ ಬಾರಿಸಿದ್ದು, ತಂಟಕ್ಕೆ ಉತ್ತಮ ಆರಂಭ ತಂದುಕೊಟ್ಟಿದ್ದಾರೆ.
ಅತ್ತ ಮತ್ತೋರ್ವ ಆರಂಭಿಕ ಆಟಗಾರ ಜಾಕ್ ಕ್ರಾವ್ಲೆ ಸಹ ಅರ್ಧಶತಕ ಬಾರಿಸಿದ್ದಾರೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಬಳಿಕ ಇಂಗ್ಲೆಂಡ್ 465 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 6 ರನ್‌ಗಳ ಮುನ್ನಡೆ ಸಾಧಿಸಿತ್ತು.
ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಶತಕಗಳ ನೆರವಿನಿಂದ ಭಾರತ 364 ರನ್ ಗಳಿಸಿ ಆಲ್‌ಔಟ್ ಆಗಿದ್ದು, ಇಂಗ್ಲೆಂಡ್‌ಗೆ 371 ರನ್‌ಗಳ ಗುರಿಯನ್ನು ನೀಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


