ಲೀಡ್ಸ್: ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ( india vs engalnd ) ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತ ಎರಡನೇ ಇನ್ನಿಂಗ್ಸ್ ಆಡಿ ಮುಗಿಸಿದ್ದು, ಇಂಗ್ಲೆಂಡ್‌ಗೆ 371 ರನ್‌ಗಳ ಗುರಿಯನ್ನು ನೀಡಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಬಳಿಕ ಇಂಗ್ಲೆಂಡ್ 465 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 6 ರನ್‌ಗಳ ಮುನ್ನಡೆ ಸಾಧಿಸಿತ್ತು.
ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಶತಕಗಳ ನೆರವಿನಿಂದ ಭಾರತ 364 ರನ್ ಗಳಿಸಿ ಆಲ್‌ಔಟ್ ಆಗಿದ್ದು, ಇಂಗ್ಲೆಂಡ್‌ಗೆ 371 ರನ್‌ಗಳ ಗುರಿಯನ್ನು ನೀಡಿದೆ.
ಈ ಗುರಿಯನ್ನು ಬೆನ್ನಟ್ಟಿರುವ ಇಂಗ್ಲೆಂಡ್ 6 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 21 ರನ್ ಕಲೆಹಾಕಿದ್ದು, ಗೆಲುವಿಗೆ ಇನ್ನೂ 350 ರನ್ ಬಾರಿಸಬೇಕಿದೆ.
ಆಸ್ತಿ ಡೀಲಿಂಗ್ ಯಶಸ್ವಿಯಾಗಬೇಕಾದರೆ ಸರಿಯಾದ ಏಜೆಂಟ್ ಆಯ್ಕೆ ಅತ್ಯಗತ್ಯ
ಎಐ ಕನ್ನಡ ಲೀಗಲ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


