Sunday, November 15, 2026
spot_img
More
    spot_img
    HomeLatest newsಬಿಜೆಪಿ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆಗೆ ಮುಹೂರ್ತ ನಿಗದಿ

    ಬಿಜೆಪಿ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆಗೆ ಮುಹೂರ್ತ ನಿಗದಿ

    ನವದೆಹಲಿ: ಕಳೆದ ಹಲವಾರು ತಿಂಗಳಿನಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ( bjp ) ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಜುಲೈ 7ರೊಳಗೆ ಅಂತಿಮ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.

    ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಎಂಟು ಕೇಂದ್ರ ಸಚಿವರು ಮತ್ತು ಇತರ ಮೂವರ ನಾಯಕರು ಹೆಸರು ಕೇಳಿ ಬರುತ್ತಿದ್ದರೂ, ಅದರಲ್ಲಿ ಎಂಟು ಮುಖಂಡರು ಮಾತ್ರ ರೇಸಿನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರೂ, ಸದ್ಯ ಕೇಳಿಬರುತ್ತಿರುವ ಸಂಭಾವ್ಯರ ಹೆಸರಿನಲ್ಲಿದೆ. ಬಿಜೆಪಿಯ ದೆಹಲಿ ನಾಯಕರು ಮತ್ತು ಸಂಘ ಪರಿವಾರದ ಜೊತೆಗೆ, ಜೋಶಿ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.‌

    ಕಳೆದ ದೆಹಲಿ ವಿಧಾನಸಭಾ ಚುನಾವಣೆಯ ವೇಳೆ ಹಲವು ಹೆಸರು ಕೇಳಿಬರುತ್ತಿತ್ತು. ಆದರೆ, ಬಿಜೆಪಿ ವರಿಷ್ಠರು ಅಚ್ಚರಿಯಾಗಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದ್ದರು. ಅದೇ ರೀತಿ ರಾಷ್ಟ್ರಾಧ್ಯಕ್ಷ ಹುದ್ದೆಗೂ ಮಹಿಳೆಯ ಹೆಸರನ್ನು ಫೈನಲ್ ಮಾಡಿದರೂ ಮಾಡಬಹುದು. ಹಾಗಾಗಿ, ಇಬ್ಬರು ಮಹಿಳೆಯರ ಹೆಸರು ಸಹ ಕೇಳಿ ಬರುತ್ತಿದೆ.

    ಒಟ್ಟಾರೆಯಾಗಿ ಹನ್ನೊಂದು ಸಂಭಾವ್ಯರ ಹೆಸರು ಪಟ್ಟಿಯಲ್ಲಿದ್ದು, ಅದರಲ್ಲಿ ಮೊದಲ ಎಂಟು ನಾಯಕರು ಪ್ರಮುಖವಾಗಿ ರೇಸಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಕ್ಷದ ಸಿದ್ಧಾಂತದ ಪ್ರಕಾರ, ಅಧ್ಯಕ್ಷರ ಹೆಸರು ಘೋಷಣೆಗೆ ಬಿಜೆಪಿ ಎಲ್ಲಾ ಪೂರ್ವಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಕೆಲವು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರ ಹೆಸರು ಇನ್ನೂ ಘೋಷಣೆಯಾಗಬೇಕಿದೆ. ಆ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಅರ್ಧಕ್ಕಿಂತ ಹೆಚ್ಚು ರಾಜ್ಯಾಧ್ಯಕ್ಷರ ನೇಮಕವಾಗದೇ, ರಾಷ್ಟ್ರಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ನಿಯಮ ಬಿಜೆಪಿಯಲ್ಲಿಲ್ಲ.

    ಹೊಸ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯನ್ನು ಇನ್ನೂ ಹೆಚ್ಚುದಿನ ಮುಂದಕ್ಕೆ ಹಾಕುವುದಿಲ್ಲ. ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಸಾಂಸ್ಥಿಕ ಚುನಾವಣೆ ಮುಕ್ತಾಯಗೊಂಡಿದೆ. ಕೆಲವು ರಾಜ್ಯಗಳಲ್ಲಿ ಬಾಕಿಯಿದ್ದು, ಅದನ್ನೂ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಬಿಜೆಪಿಯ ನಾಯಕರೊಬ್ಬರು ಹೇಳಿದ್ದಾರೆ.

    ಹಾಲಿ ಅಧ್ಯಕ್ಷರಾಗಿರುವ ಜೆಪಿ ನಡ್ಡಾ ಅವರು ಕೇಂದ್ರದಲ್ಲಿ ಆರೋಗ್ಯ ಇಲಾಖೆಯನ್ನೂ ನಿಭಾಯಿಸುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆಗೆ ಮುನ್ನ, ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಪ್ರಾಂತ್ ಪ್ರಚಾರಕ್ ಸಭೆ ಜುಲೈ 4 ರಿಂದ 6ನೇ ತಾರೀಕಿನವರೆಗೆ ದೆಹಲಿಯ ಕೇಶವ್ ಕುಂಜ್‌ನಲ್ಲಿ ನಡೆಯಲಿದೆ. ಇದಾದ ನಂತರ, ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಎಐ ಲೀಗಲ್‌ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ

    ಕಾಲಲ್ಲಿ ಇರುವುದನ್ನು ಯಾವಾಗ ಬಿಚ್ಚಿ ಹೊಡಿತಾರೋ ಗೊತ್ತಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಸಿಟಿ ರವಿ ವಿವಾದಾತ್ಮಕ ಹೇಳಿಕೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search