ಬೆಂಗಳೂರು: ಬಾಗಲಕೋಟೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಹೇಳಿಕೆ ನೀಡಿದ್ದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ( g parameshwar ) ಇಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಹಣಕಾಸಿನ ತೊಂದರೆಯಿಲ್ಲ. ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹಣ ಕೊಟ್ಟಿದ್ದಾರೆ. ಅವರು ಯಾರೋ ತಮಾಷೆಗೆ ಕೇಳಿದ್ರು ಎಂದು ನಾನು ತಮಾಷೆಯಾಗಿ ಮಾತನಾಡಿದ್ದೆ. ಆದರೆ ಅದು ಬರೀ ತಮಾಷೆಯಷ್ಟೇ. ನಮ್ಮ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ. ಆದರೆ ಬಿಡುಗಡೆ ಆಗುವಾಗ ಸ್ವಲ್ಪ ವಿಳಂಬವಾಗುತ್ತದೆ. ನನ್ನ ಹೇಳಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ. ನಾನು ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಬಾಗಲಕೋಟೆಯಲ್ಲಿ ನಿನ್ನೆ ಮಾತನಾಡಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ಧಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಲಿ. ಪ್ರಸ್ತಾವನೆ ಸಿದ್ಧಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ಹಣವಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದರು. ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದಿದ್ದರು. ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ವಿಪಕ್ಷ ನಾಯಕರು ಕಿಡಿಕಾರಿದ್ದು, ರಾಜ್ಯ ಸರ್ಕಾರದ ಬೊಕ್ಕಸ ಸಂಪೂರ್ಣ ಖಾಲಿಯಾಗಿದೆ. ಇದನ್ನು ಪರಮೇಶ್ವರ್ ಅವರೇ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದರು.
ಈ ಬೆನ್ನಲ್ಲೇ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪರಮೇಶ್ವರ್ ಅವರು ನಾನು ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳೇ ಇಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
ಬಿಆರ್ ಪಾಟೀಲ್ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ: ಸಚಿವ ಜಮೀರ್ ಅಹ್ಮದ್ ಖಾನ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


