ಹೊಸದಿಲ್ಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದೆ.
ಈ ಕುರಿತು ಇಂದು ( ಜುಲೈ 24 ) ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿಗಳು ಎರಡೂ ಕಡೆಯ ವಾದಗಳನ್ನು ಆಲಿಸಿದ್ದಾರೆ. ಮೊದಲಿಗೆ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರೆ, ಬಳಿಕ ದರ್ಶನ್ ಪರ ವಕೀಲ ಸಿದ್ಧಾರ್ಥ್ ದವೆ ವಾದ ಸಲ್ಲಿಸಿದರು.
ಎರಡೂ ಕಡೆಯ ವಾದವನ್ನು ಆಲಿಸಿದ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ ವಾದವನ್ನು ಲಿಖಿತ ರೂಪದಲ್ಲಿ 3 ಪುಟಗಳ ಒಳಗೆ ಇನ್ನೊಂದು ವಾರದಲ್ಲಿ ಸಲ್ಲಿಸಬೇಕು ಎಂದು ಸಹ ಹೇಳಿದೆ. ಕನಿಷ್ಟವೆಂದರೂ 10 ದಿನಗಳ ನಂತರ ದರ್ಶನ್ ಜಾಮೀನು ರದ್ದು ಅರ್ಜಿ ಆದೇಶವನ್ನು ಕೋರ್ಟ್ ಬಹಿರಂಗಪಡಿಸಲಿದೆ.
ದರ್ಶನ್ಗೆ ಕ್ರಿಮಿನಲ್ ಹಿನ್ನೆಲೆ ಇದೆ, ಜೈಲಲ್ಲೂ ಅಪರಾಧಿಗಳೊಂದಿಗೆ ಸಿಗರೇಟ್ ಸೇದ್ತಿದ್ತ; ಸುಪ್ರೀಂನಲ್ಲಿ ವಾದ ಜೋರು
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


