ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ( ಜುಲೈ 25 ) ದಿಲ್ಲಿಯಲ್ಲಿ ಎಐಸಿಸಿಯ ಹಿಂದುಳಿದ ವರ್ಗಗಳ ಘಟಕ ಆಯೋಜಿಸಿರುವ ‘ಭಾಗಿದಾರಿ ನ್ಯಾಯ ಸಮ್ಮೇಳನ’ದಲ್ಲಿ ಭಾಗವಹಿಸಲಿದ್ದಾರೆ.
ಇಂದು ಸಂಜೆಯೇ ದಿಲ್ಲಿಗೆ ತೆರಳಲಿರುವ ಇವರು, ಕೇಂದ್ರ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಜನಜಾಗೃತಿ ಮೂಡಿಸಲು ಈ ಸಭೆಗಳು ಹೆಚ್ಚು ಪರಿಣಾಮಕಾರಿಯಾಗಲಿವೆ ಎಂಬ ಅಂದಾಜು ರಾಜಕೀಯ ವಲಯದಲ್ಲಿದೆ.
ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಿದ್ದಾರೆ. ಶುಕ್ರವಾರ ಆಯೋಜನೆಗೊಂಡಿರುವ ಹಿಂದುಳಿದ ವರ್ಗಗಳ ಮುಖಂಡರ ಸಭೆ ಮಹತ್ವ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಹೈಕಮಾಂಡ್‌ನ ಮೊದಲ ಸುತ್ತಿನ ಸಭೆ ನಡೆದಿತ್ತು. ಮುಂದಿನ ಎಲ್ಲ ಚುನಾವಣೆಗಳಲ್ಲೂ ಕಾಂಗ್ರೆಸ್ ಹಿಂದುಳಿದ ವರ್ಗಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಣತಂತ್ರ ರೂಪಿಸುತ್ತಿದೆ. ಜೊತೆಗೆ, ವಿಧಾನ ಪರಿಷತ್‌ನ ನಾಲ್ಕು ಸದಸ್ಯ ನಾಮನಿರ್ದೇಶನಕ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರ ನೇಮಕಾತಿ ಕುರಿತಂತೆಯೂ ಚರ್ಚಿಸಿ ನಿರ್ಣಯಗಳಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಜುಲೈ 24ರಂದು ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಇಲ್ಲಿದೆ ಎಲ್ಲ ಜಲಾಶಯಗಳ ಸಂಪೂರ್ಣ ವಿವರ
ಎಐ ಕನ್ನಡ ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


