Friday, November 6, 2026
spot_img
More
    spot_img
    HomeLatest newsಕಾಡಿನಲ್ಲಿ ಜಾನುವಾರು ಮೇಯಿಸುವುದು ನಿಷೇಧ: ಈ ಇಬ್ಬರಿಗೆ ಮಾತ್ರ ಅವಕಾಶವಿದೆ ಎಂದ ಈಶ್ವರ್‌ ಖಂಡ್ರೆ

    ಕಾಡಿನಲ್ಲಿ ಜಾನುವಾರು ಮೇಯಿಸುವುದು ನಿಷೇಧ: ಈ ಇಬ್ಬರಿಗೆ ಮಾತ್ರ ಅವಕಾಶವಿದೆ ಎಂದ ಈಶ್ವರ್‌ ಖಂಡ್ರೆ

    ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ 2006ರ ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

    ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸುತ್ತದೆ. ಇಷ್ಟೊಂದು ದನಕರುಗಳನ್ನು ಒಟ್ಟಿಗೆ ಕಾಡಿಗೆ ತೆಗೆದುಕೊಂಡು ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ, ನೀರಿನ ಕೊರತೆ ಎದುರಾಗುತ್ತಿದೆ. ಕಾಲುಬಾಯಿ ರೋಗ, ಚರ್ಮಗಂಟು ಅಥವಾ ಬಾವು (ಲಿಂಪಿ ಸ್ಕಿನ್), ನೆರಡಿ (ಆಂಥರಾಕ್ಸ್) ಮೊದಲಾದ ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇರುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಜಾನುವಾರುಗಳನ್ನು ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ ಸ್ಥಳೀಯರ ದನಕರುಗಳಿಗೆ ಮತ್ತು ಅರಣ್ಯಹಕ್ಕು ಕಾಯಿದೆಯಡಿ ಹಕ್ಕು ಪಡೆದವರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

    ಚಾಮರಾಜನಗರದಲ್ಲಿ ಈಗಾಗಲೇ ಅರಣ್ಯ ಇಲಾಖೆ, ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿಯನ್ನು ಬಳಸಿಕೊಂಡು 10-15 ರೈತರಿಗೆ ಹೆಚ್ಚು ಹಾಲು ನೀಡುವ ಹೈಬ್ರೀಡ್ ಹಸುಗಳನ್ನು ಕೊಡಿಸಿದ್ದಾರೆ. ಪ್ರಸ್ತುತ ಕಾಡಿನಲ್ಲಿ ದನ ಮೇಯಿಸುವ ಕಾಯಕವನ್ನೇ ಜೀವನೋಪಾಯ ಮಾಡಿಕೊಂಡಿರುವವರಿಗೆ ಇಂತಹ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಹಂತ ಹಂತವಾಗಿ ಕಾಡಿನಲ್ಲಿ ದನ, ಕರು, ಎಮ್ಮೆ, ಮೇಕೆ, ಕುರಿಗಳನ್ನು ಮೇಯಿಸದಂತೆ ಮನವೊಲಿಸಲಾಗುವುದು ಎಂದೂ ತಿಳಿಸಿದ್ದಾರೆ.

    ಮದ್ರಾಸ್ ಹೈಕೋರ್ಟ್ ನಲ್ಲಿ ಈ ಸಂಬಂಧ ಸುದೀರ್ಘ ವಾದ ಪ್ರತಿವಾದ ನಡೆದು, ಅಂತಿಮವಾಗಿ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಅವಕಾಶ ಇರುವುದಿಲ್ಲ ಎಂಬ ತೀರ್ಪು ಬಂದಿದೆ. ಆ ತೀರ್ಪಿನ ಬಳಿಕ ರಾಜ್ಯಕ್ಕೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರು ತಂದು ರಾಜ್ಯದ ಕಾಡಿನಲ್ಲಿ ಮೇಯಿಸಲಾಗುತ್ತಿದೆ. ತಿಂಗಳುಗಟ್ಟಲೆ ಹೀಗೆ ಕಾಡಿನಲ್ಲಿ ದನಕರು ಮೇಯಿಸುವುದರಿಂದ ಕಾಡಿನ ಹುಲ್ಲುಗಾವಲು ಬರಿದಾಗುತ್ತಿದೆ, ಸಸ್ಯಸಂವರ್ಧನೆಗೂ ಅಡ್ಡಿಯಾಗುತ್ತದೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದು ವನ್ಯಜೀವಿಗಳಿಗೆ ವಿಷ ಹಾಕುವ ಹಂತ ತಲುಪಿದ್ದ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಮತ್ತು ನಿಯಮಾನುಸಾರ ಕ್ರಮ ವಹಿಸಲು ಸೂಚಿಸಲಾಗಿತ್ತು ಎಂದೂ ತಿಳಿಸಿದ್ದಾರೆ.

    ಕೆಳ ನ್ಯಾಯಾಲಯಗಳ ರೀತಿ ತಪ್ಪು ಮಾಡಿದೆ; ದರ್ಶನ್‌ಗೆ ಬೇಲ್‌ ಕೊಟ್ಟ ಹೈಕೋರ್ಟ್‌ ವಿರುದ್ಧ ಸುಪ್ರೀಂ ಗರಂ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search