ಬೆಂಗಳೂರು: ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗಲಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ದೂರು ಇದ್ದೇ ಇರುತ್ತದೆ. ಪೂರ್ವ ನಿಯೋಜಿತ ಪ್ರವಾಸ ಕಾರ್ಯಕ್ರಮದಿಂದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.
ಕುಟುಂಬ ಜೊತೆ ಪ್ರವಾಸಕ್ಕೆ ಹೋಗಿದ್ದರಿಂದ ಸುರ್ಜೆವಾಲ ಅವರನ್ನು ಭೇಟಿಯಾಗಲಿಲ್ಲ. ದೆಹಲಿಗೆ ಹೋಗಿ ಅವರನ್ನು ಭೇಟಿ ಮಾಡಬೇಕು ಎಂದುಕೊಂಡಿದ್ದೇನೆ. ಭೇಟಿ ಸಂದರ್ಭದಲ್ಲಿ ಕೆಲವು ವಿಚಾರಗಳನ್ನು ಮಾತನಾಡುತ್ತೇನೆ. ಎಲ್ಲವೂ ಸರಿಯಾಗಿ ನಡೆದುಕೊಂಡು ಹೋಗುತ್ತಿದೆ ಎಂದು ಹೇಳಿದರು.
ಮಾರ್ಗದರ್ಶನವನ್ನು ಮಾಡುತ್ತಿದ್ದಾರೆ. ಸಚಿವರ ಭೇಟಿ ಸಂದರ್ಭದಲ್ಲಿ ನನಗೆ ಆಹ್ವಾನವಿಲ್ಲ. ಪೂರ್ವ ನಿಯೋಜಿತ ಪ್ರವಾಸವಿಲ್ಲದಿದ್ದರೆ ಭೇಟಿ ಮಾಡುತ್ತಿದ್ದೆ ಎಂದು ಅವರು ಹೇಳಿದರು.
ನಾನು ಮುನಿಸಿಕೊಂಡು ಸುರ್ಜೆವಾಲ ಅವರು ಕರೆದಿದ್ದ ಸಭೆಗೆ ಗೈರು ಹಾಜರಾಗಿ ವಿದೇಶಿ ಪ್ರವಾಸಕ್ಕೆ ಹೋಗಿರಲಿಲ್ಲ. ಏನು ಹೇಳಬೇಕೋ ಅದನ್ನು ನೇರವಾಗಿ ಹೇಳುತ್ತೇನೆ. ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಪ್ರತಿಕ್ರಿಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ಯಾವ ಶಾಸಕರೂ ಕೂಡ ಯಾರಿಂದಲೂ ಹೇಳಿಸಿಕೊಂಡು ಕೆಲಸ ಮಾಡಬೇಕಿಲ್ಲ ಎಂದರು.
ಭಾರತೀಯ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 262 ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


