Monday, August 31, 2026
spot_img
More
    spot_img
    HomeJobsಮೈಸೂರಿಗರಿಗೆ ಗುಡ್‌ನ್ಯೂಸ್ | ಇಂದು ಬೃಹತ್‌ ಉದ್ಯೋಗ ಮೇಳ: 100ಕ್ಕೂ ಹೆಚ್ಚು ಕಂಪನಿ ಭಾಗಿ; ಇಲ್ಲಿದೆ...

    ಮೈಸೂರಿಗರಿಗೆ ಗುಡ್‌ನ್ಯೂಸ್ | ಇಂದು ಬೃಹತ್‌ ಉದ್ಯೋಗ ಮೇಳ: 100ಕ್ಕೂ ಹೆಚ್ಚು ಕಂಪನಿ ಭಾಗಿ; ಇಲ್ಲಿದೆ ಸಂಪೂರ್ಣ ವಿವರ

    ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್‌ ಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ ಹಾಗೂ ಬೃಹತ್ ಆರೋಗ್ಯ ಶಿಬಿರವನ್ನು ಇಂದು ( ಜುಲೈ 24 ) ಜೆಕೆ. ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು ತಿಳಿಸಿದರು.

    Advertisement

    ಚಾಮರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಶಾಸಕ ಕೆ.ಹರೀಶ್‌ಗೌಡ ಅವರ ಅಭಿಮಾನಿ ಬಳಗದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾ ಗಿದ್ದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಬುಧ ವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಬೃಹತ್ ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು, ಕಾರ್ಖಾನೆಗಳು, ಉದ್ಯಮ ಗಳು, ಕೌಶಲ ತರಬೇತಿ ಕೇಂದ್ರಗಳು ಹಾಗೂ ಉದ್ಯೋಗ ಸಂಸ್ಥೆಗಳು ಭಾಗವಹಿಸಲಿದ್ದು, ಉದ್ಯೋಗಾ ಕಾಂಕ್ಷಿ ಯುವಕ, ಯುವತಿಯರಿಗೆ ಇದೊಂದು ಸುವರ್ಣಾವಕಾಶವಾಗಿದೆ. 18 ರಿಂದ 35 ವರ್ಷ ವಯೋಮಾನದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಭಾಗ ವಹಿಸಬಹುದಾಗಿದೆ. 10 ಪ್ರತಿ ಸ್ವ-ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳೊಂದಿಗೆ ನೇರವಾಗಿ ಹಾಜರಾಗಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಜೆಕೆ ಟೈಯರ್ಸ್, ಏಷಿಯನ್ ಪೇಂಟ್ಸ್, ರಾಣೆ ಮದ್ರಾಸ್, ರೈಟ್ ವೇ, ಸನ್ ಬಿಗ್ಗೆಸ್, ಭಾರತ್ ಫೈನಾನ್ಸ್, ಮುತ್ತೂಟ್ ಫೈನಾನ್ಸ್ ಸೇರಿದಂತೆ ಪ್ರಮುಖ ಕಂಪೆನಿಗಳು ಭಾಗವಹಿಸಲಿವೆ. ಉದ್ಯೋ ಗಾಕಾಂಕ್ಷಿಗಳ ನೋಂದಣಿಗಾಗಿ ಮೂರು ಕೌಂಟರ್ ಗಳನ್ನು ತೆರೆಯಲಾಗಿದೆ. ಈಗಾಗಲೇ ಆನ್‌ಲೈನ್ ಮೂಲಕ 1,000ಕ್ಕೂ ಹೆಚ್ಚು ಮಂದಿ ನೋಂದಾ ಯಿಸಿಕೊಂಡಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಒಟ್ಟಾರೆ 8 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಸತತ ಒಂದು ತಿಂಗಳಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಆಹಾರ ಸಮಿತಿ, ಆರೋಗ್ಯ ಸಮಿತಿ, ಉದ್ಯೋಗ ಸಮಿತಿ ನಾನಾ ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಭಾಗಿಯಾಗುವ ಎಲ್ಲರಿಗೂ ಊಟದ ವ್ಯವಸ್ಥೆ ಇರಲಿದೆ. ಶೌಚಗೃಹ, ಕುಡಿಯುವ ನೀರು ಸೇರಿದಂತೆ ಯಾವುದೇ ತೊಂದರೆ ಆಗದಂತೆ ಎಲ್ಲ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ ಎಂದು ಹೇಳಿದರು.

    ಬಿಎಂಟಿಸಿ ಭಾಗಿ: ಬಿಎಂಟಿಸಿ ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದೆ. ಹೊರಗುತ್ತಿಗೆ ಆಧಾರದಲ್ಲಿ 500 ಮಂದಿ ಚಾಲಕರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಬಿಎಂಟಿಸಿ ಕೂಡ ಎರಡು ಸ್ಟಾಲ್‌ಗಳನ್ನು ತೆರೆಯಲಿದೆ ಎಂದರು.

    ಧರ್ಮಸ್ಥಳ ಸರಣಿ ಕೊಲೆ: ಕೇರಳ ಸರ್ಕಾರ ಮಧ್ಯ ಪ್ರವೇಶದಿಂದ ತನಿಖೆ ದಿಕ್ಕು ತಪ್ಪಲಿದೆ ಎಂದ ಆರಗ ಜ್ಞಾನೇಂದ್ರ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading