Wednesday, November 4, 2026
spot_img
More
    spot_img
    HomeInternationalಬ್ರಿಟನ್‌ ತಲುಪಿದ ಮೋದಿಗೆ ಪ್ರಧಾನಿ ಕೀರ್‌ ಸ್ಟಾಮರ್‌ರಿಂದ ಸಾಂಪ್ರದಾಯಿಕ ಸ್ವಾಗತ

    ಬ್ರಿಟನ್‌ ತಲುಪಿದ ಮೋದಿಗೆ ಪ್ರಧಾನಿ ಕೀರ್‌ ಸ್ಟಾಮರ್‌ರಿಂದ ಸಾಂಪ್ರದಾಯಿಕ ಸ್ವಾಗತ

    ಲಂಡನ್‌: ನಾಲ್ಕು ದಿನಗಳ ಲಂಡನ್‌, ಮಾಲ್ಡೀವ್ಸ್ ಪ್ರವಾಸದ ಅಂಗವಾಗಿ ಲಂಡನ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾಮರ್‌ ಸಾಂಪ್ರದಾಯಿಕ ಸ್ವಾಗತ ಕೋರಿದ್ದಾರೆ.

    ಇದೇ ವೇಳೆ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿಯಾದ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಪ್ರವಾಸದಲ್ಲಿ ಮೋದಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕೀರ್‌ ಸ್ಟಾಮರ್‌ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸಹಿ ಹಾಕುವ ಸಾಧ್ಯತೆ ಇದೆ.

    ಮೂರು ವರ್ಷಗಳ ಚರ್ಚೆಯ ಬಳಿಕ ಮೇ ತಿಂಗಳಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದ್ದು, ಇದು ಭಾರತದ ಶೇ.99 ರಷ್ಟು ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕಲಿದೆ. ಮುಖ್ಯವಾಗಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದರಿಂದ ಪ್ರಸ್ತುತ ಇರುವ 60 ಶತಕೋಟಿ ಡಾಲರ್‌ನಿಂದ ವಹಿವಾಟು ದ್ವಿಗುಣಗೊಳ್ಳುವ ಸಾಧ್ಯತೆಗಳಿವೆ. ಜೊತೆಗೆ ಬ್ರಿಟನ್‌ ಉತ್ಪನ್ನಗಳಾದ ವಿಸ್ಕಿ ಮತ್ತು ಆಟೋಮೊಬೈಲ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸುಲಭ ಪ್ರವೇಶ ಸಿಗಲಿದೆ. ಇದರೊಂದಿಗೆ ರಕ್ಷಣಾ ವಲಯ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

    ಇನ್ನೂ ಬ್ರಿಟನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಭಾವುಕರಾದರು. ಸಾಂಪ್ರದಾಯಿಕ ಸ್ವಾಗತಕ್ಕಾಗಿ ಅಲ್ಲಿನ ಭಾರತೀಯ ಸಮೂಹಕ್ಕೆ ಧನ್ಯವಾದ ಸಲ್ಲಿಸಿದರಲ್ಲದೇ ಭಾರತದ ಪ್ರಗತಿಗೆ ನಿಮ್ಮ ಪ್ರೀತಿ ಮತ್ತು ಬದ್ಧತೆ ನೋಡಿ ಹೃದಯ ತುಂಬಿಬರುತ್ತಿದೆ ಎಂದು ಭಾವುಕರಾದರು. ಗ್ಲೋಬಲ್‌ ಮಾರ್ಕೆಟ್‌ ಇಂಟೆಲಿಜೆನ್ಸ್ ಪ್ರಕಾರ, ಈ ಒಪ್ಪಂದವು ಭಾರತಕ್ಕೆ ಗಣನೀಯ ಆರ್ಥಿಕ ಉತ್ತೇಜನ ನೀಡಲಿದೆ. 2024ರಲ್ಲಿ ಯುಕೆಯಿಂದ ಭಾರತಕ್ಕೆ 130 ಬಿಲಿಯನ್‌ ಡಾಲರ್‌ನಷ್ಟು (ಭಾರತದ ಜಿಡಿಪಿಯ 3.3%) ವಿದೇಶಿ ವಿನಿಮಯ ಹರಿವು ದಾಖಲಾಗಿದ್ದು, ಈ ಒಪ್ಪಂದದಿಂದ ಈ ಹರಿವು ಮತ್ತಷ್ಟು ಹೆಚ್ಚಲಿದೆ.

    ವಿಶೇಷವಾಗಿ, ಯುಕೆಯಲ್ಲಿ ಕೆಲಸ ಮಾಡುವ ಭಾರತೀಯ ಐಟಿ ವೃತ್ತಿಪರರಿಗೆ ಮೂರು ವರ್ಷಗಳವರೆಗೆ ರಾಷ್ಟ್ರೀಯ ವಿಮೆಯಿಂದ ವಿನಾಯಿತಿ ನೀಡುವ ನಿಬಂಧನೆಯು ಅವರ ಉಳಿತಾಯ ಮತ್ತು ವಿದೇಶಿ ವಿನಿಮಯ ಹರಿವನ್ನು ಹೆಚ್ಚಿಸಲಿದೆ. 2024ರಲ್ಲಿ 56.7 ಬಿಲಿಯನ್‌ ಡಾಲರ್‌ ಆಗಿರುವ ದ್ವಿಪಕ್ಷೀಯ ವಾಣಿಜ್ಯವನ್ನು 2030ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.

    ಬ್ರಿಟನ್‌ ಭೇಟಿಯ ಬಳಿಕ, ಪ್ರಧಾನಿ ಮೋದಿ ಜುಲೈ 25-26ರಂದು ಮಾಲ್ಡೀವ್‌್ಸಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್‌್ಸನ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 1965ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದ 60ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಮಾಲ್ಡೀವ್‌್ಸ, ಈ ಸಂದರ್ಭದಲ್ಲಿ ಮೋದಿಯವರಿಗೆ ಗೌರವಾನ್ವಿತ ಸ್ವಾಗತವನ್ನು ನೀಡಲಿದೆ. ಮಾಲ್ಡೀವ್‌್ಸನ ರಾಷ್ಟ್ರಪತಿ ಮೊಹಮ್ಮದ್‌ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ, ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿಸುವ ಬಗ್ಗೆ ಚರ್ಚಿಸಲಿದ್ದಾರೆ.

    ಕೆಳ ನ್ಯಾಯಾಲಯಗಳ ರೀತಿ ತಪ್ಪು ಮಾಡಿದೆ; ದರ್ಶನ್‌ಗೆ ಬೇಲ್‌ ಕೊಟ್ಟ ಹೈಕೋರ್ಟ್‌ ವಿರುದ್ಧ ಸುಪ್ರೀಂ ಗರಂ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search