Tuesday, September 1, 2026
spot_img
More
    spot_img
    HomeLatest newsBIG NEWS: ಮೈಸೂರು ದಸರಾ ಗಜಪಯಣ ಚಾಲನೆ ದಿನಾಂಕ ಘೋಷಣೆ; ಈ ಬಾರಿಯೂ ಅಭಿಮನ್ಯು ಕ್ಯಾಪ್ಟನ್‌

    BIG NEWS: ಮೈಸೂರು ದಸರಾ ಗಜಪಯಣ ಚಾಲನೆ ದಿನಾಂಕ ಘೋಷಣೆ; ಈ ಬಾರಿಯೂ ಅಭಿಮನ್ಯು ಕ್ಯಾಪ್ಟನ್‌

    ಬೆಂಗಳೂರು: ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

    Advertisement

    ವಿಕಾಸಸೌಧದಲ್ಲಿ 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಲಿದ್ದಾನೆ ಎಂದು ತಿಳಿಸಿದರು.

    ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ ಎಂದರು.

    ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತೀಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ ಎಂದು ತಿಳಿಸಿದರು.

    ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳಿಗೆ ಆ.4ರಂದು ನಡೆಯುವ ಗಜಪಯಣದಲ್ಲಿ ವಿಧ್ಯುಕ್ತವಾಗಿ ಮತ್ತು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಗುವುದು ಎಂದೂ ತಿಳಿಸಿದರು.

    ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಉನ್ನತಾಧಿಕಾರಿಗಳಾದ ಮಹೇಶ್ ಶಿರೂರ್, ಮನೋಜ್ ಕುಮಾರ್, ಮಾಲತಿ, ಪ್ರಭುಗೌಡ ಬಿರಾದಾರ್ ಪಾಲ್ಗೊಂಡಿದ್ದರು.

    ಮಹತ್ವಾಕಾಂಕ್ಷೆಯ ಹೊಸ ಯುಕೆ – ಭಾರತ ವಿಷನ್‌ 2035 ಒಪ್ಪಂದ ಘೋಷಿಸಿದ ಯುಕೆ ವಿದೇಶಾಂಗ ಸಚಿವ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading