ಬೆಂಗಳೂರು: ಸರ್ಕಾರಿ ಶಾಲಾಮಕ್ಕಳಿಗೆ ಹಾಲಿನ ಪುಡಿ ಬದಲಿಗೆ ಸುವಾಸನೆ ಭರಿತ ಹಾಲು ನೀಡಲು ಬೆಂಗಳೂರು ಮಿಲ್ಕ್ ಯೂನಿಯನ್ ಲಿಮಿಟೆಡ್ ನಿರ್ಧರಿಸಿದೆ.
ಪ್ರಾಯೋಗಿಕವಾಗಿ ಬೆಂಗಳೂರು ನಗರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಈ ಹಾಲನ್ನು ವಿತರಿಸಲು ಯೋಜನೆ ರೂಪಿಸಲಾಗಿದ್ದು, ಯಶಸ್ವಿಯಾದರೆ ರಾಜ್ಯವ್ಯಾಪಿ ವಿಸ್ತರಿಸುವ ಚಿಂತನೆ ನಡೆದಿದೆ.
ಬುಧವಾರ ವಿಕಾಸಸೌಧದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಈ ಕುರಿತು ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಪ್ರಸ್ತುತ ಮೂರು ಜಿಲ್ಲೆಯ ಶಾಲಾಮಕ್ಕಳಿಗೆ ದಿನನಿತ್ಯ 250 ಟನ್ ಹಾಲಿನ ಪುಡಿ ಪೂರೈಕೆಯಾಗುತ್ತಿದೆ, ಇದನ್ನು ಶಿಕ್ಷಕರು ನೀರಿನಲ್ಲಿ ಬೆರೆಸಿ ಮಕ್ಕಳಿಗೆ ತಲಾ 200 ಗ್ರಾಂ ಕೊಡಬೇಕಾಗಿದೆ. ಆದರೆ, ಕೆಲವೆಡೆ ಶುದ್ಧ ನೀರಿನ ಬಳಕೆಯಿಲ್ಲದಿರುವುದು, ಹಾಲಿನ ಪುಡಿಯನ್ನು ಹೋಟೆಲ್, ಟೀ ಅಂಗಡಿಗಳಿಗೆ ಮಾರಾಟ ಮಾಡುವುದು ಹಾಗೂ ಮನೆಗೆ ತೆಗೆದುಕೊಂಡು ಹೋಗುವ ದೂರುಗಳು ಬಂದಿವೆ. ಇದರಿಂದ ಸರ್ಕಾರದ ಉದ್ದೇಶ ಮಕ್ಕಳಿಗೆ ತಲುಪುತ್ತಿಲ್ಲ. ಜೊತೆಗೆ, ಹಾಲಿನ ಪುಡಿ ಪೂರೈಕೆಗೆ ಹೆಚ್ಚಿನ ವೆಚ್ಚವಾಗುತ್ತಿದ್ದು, ಈ ಸಮಸ್ಯೆಗೆ ಪರಿಹಾರವಾಗಿ ಸುವಾಸನೆ ಭರಿತ ಹಾಲು ನೀಡಲು ನಿರ್ಧರಿಸಲಾಗಿದೆ.
ಮಂಡ್ಯ: ಬಿಸಿಯೂಟದಲ್ಲಿ ಮೊಟ್ಟೆ ನೀಡಿದ್ದಕ್ಕೆ ಶಾಲೆ ಬಿಟ್ಟ 80ಕ್ಕೂ ಹೆಚ್ಚು ಮಕ್ಕಳು!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


