ಬೆಂಗಳೂರು: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಇತರ ಧರ್ಮೀಯರಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ, ಬಾಗಲಕೋಟೆಯ ಜಮಖಂಡಿಯ ಮೂವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಆರೋಪಿಗಳಾಗಿದ್ದ ಮುಸ್ತಾಫಾ, ಅಲಿಸಾಬ್ ಮತ್ತು ಸುಲೇಮನ್ ಎಂಬುವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವೆಂಕಟೇಶ್ ಟಿ.ನಾಯ್ಕ ಅವರಿದ್ದ ಧಾರವಾಡ ಪೀಠ ಈ ತೀರ್ಪು ನೀಡಿದೆ.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ಕಾಯ್ದೆ ಸೆಕ್ಷನ್ 4ರ ಅಡಿಯಲ್ಲಿ ಧಾರ್ಮಿಕ ಮತಾಂತರ ಪ್ರಚೋದನೆಗೆ ಒಳಗಾಗಿ ಮತಾಂತರಗೊಂಡ ವ್ಯಕ್ತಿಯ ರಕ್ತಸಂಬಂಧಿಕರು ಹಾಗೂ ಪೋಷಕರಿಗೆ ಮಾತ್ರ ದೂರು ಸಲ್ಲಿಸುವುದಕ್ಕೆ ಅಧಿಕಾರವಿದೆ. ಆದರೆ, ಈ ಪ್ರಕರಣದಲ್ಲಿ ದೂರು ದಾಖಲಿಸಿರುವ ವ್ಯಕ್ತಿ ಮೂರನೆಯವರಾಗಿದ್ದಾರೆ ಎಂದು ಪೀಠ ತಿಳಿಸಿದೆ. ಅರ್ಜಿದಾರರ ವಿರುದ್ಧ ಸೆಕ್ಷನ್ 3ರ ಅಡಿಯಲ್ಲಿ ತಿಳಿಸಿರುವಂತೆ, ಮತಾಂತರಕ್ಕೆ ಪ್ರಚೋದನೆ ಮಾಡಿರುವ ಸಂಬಂಧದ ಆರೋಪಗಳಿಲ್ಲ. ಹೀಗಾಗಿ, ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ಪ್ರಕರಣ ರದ್ದುಪಡಿಸುತ್ತಿರುವುದಾಗಿ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ-3 ಫಲಿತಾಂಶ ಪ್ರಕಟ: ಹೀಗಿದೆ ರಿಸಲ್ಟ್ ಚೆಕ್ ಮಾಡುವ ವಿಧಾನ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


