ಬೆಂಗಳೂರು: ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ಏಕರೂಪ ದರ 200 ರೂ. ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸೆ.12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಹಾಗೂ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ಭಾಗವಾಗಿ ಮಧ್ಯಂತರ ಕೋರಿಕೆಗೆ ಸಂಬಂಧಿಸಿದ ವಿಚಾರಣೆ ನಡೆಸಿ, ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ನಿನ್ನೆ ( ಸೆಪ್ಟೆಂಬರ್ 23 ) ಪ್ರಕಟಿಸಿತು.
ಹೀಗೆ ಸಿನಿಮಾ ಟಿಕೆಟ್ ದರದ ನಿಗದಿ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದವರ ಪೈಕಿ ಹೊಂಬಾಳೆ ಫಿಲ್ಮ್ಸ್ ಸಹ ಒಂದಾಗಿದ್ದು, ಇದೇ ಸಂಸ್ಥೆ ನಿರ್ಮಾಣದ ಕಾಂತಾರ ಚಿತ್ರದ ವಿರುದ್ಧ ಇದೀಗ ಕೆಲ ನೆಟ್ಟಿಗರು ತಿರುಗಿಬಿದ್ದಿದ್ದಾರೆ.
ಬಹು ದಿನಗಳಿಂದ ಇದ್ದ ಟಿಕೆಟ್ ದರದ ಸಮಸ್ಯೆಯನ್ನು ಸರಿಪಡಿಸಿದ್ದ ಸರ್ಕಾರದ ನಿಯಮದ ವಿರುದ್ಧ ಕೋರ್ಟ್ ಮೆಟ್ಟಿಲೇರುವ ಮೂಲಕ ಹೊಂಬಾಳೆ ಫಿಲ್ಮ್ಸ್ ಸಾಮಾನ್ಯ ಜನರಿಗೆ ಹಿನ್ನಡೆ ತಂದಿಟ್ಟಿದ್ದು, ಈ ಕಾರಣಕ್ಕೆ ಈ ಸಂಸ್ಥೆ ನಿರ್ಮಾಣದ ಚಿತ್ರವನ್ನು ಬೆಳ್ಳಿ ತೆರೆ ಮೇಲೆ ವೀಕ್ಷಿಸುವುದಿಲ್ಲ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.
ಇನ್ನು ಈ ಟ್ವೀಟ್‌ಗಳಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವೊಂದಷ್ಟು ಮಂದಿ ಈ ರೀತಿ ಹೇಳಿದರೆ ಚಿತ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.
3 ದಿನ ಅಲ್ಲ ಇನ್ನುಮುಂದೆ ಶಾಲಾ ಮಕ್ಕಳಿಗೆ 5 ದಿನ ರಾಗಿ ಮಾಲ್ಟ್ ವಿತರಣೆ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


