ಬೆಂಗಳೂರು: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿರುವಾಗಲೇ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಪೊಲೀಸ್ ಇಲಾಖೆ ತೆಗೆದುಕೊಂಡಿದೆ.
ಆದರೆ ಮಹೇಶ್ ಶೆಟ್ಟಿ ತಿಮರೋಡಿಯವನ್ನು ಇಂತಹ ಸಮಯದಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಿರುವುದು ನ್ಯಾಯವನ್ನು ಹತ್ತಿಕ್ಕುವ ಕೆಲಸ ಎಂದು ಹಲವರು ಕಿಡಿಕಾರಿದ್ದಾರೆ.
ಸೌಜನ್ಯ ಪರ ಹಾಗೂ ಧರ್ಮಸ್ಥಳದಲ್ಲಿ ನಡೆದ ಹಲವು ಅನುಮಾನಾಸ್ಪದ ಸಾವುಗಳ ಬಗ್ಗೆ ವಿಡಿಯೊ ಮಾಡಿ ಸಂಚಲನ ಸೃಷ್ಟಿಸಿದ್ದ ಸಮೀರ್ ಎಂಡಿ ಸಹ ಈ ಕುರಿತು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಗಡಿಪಾರು ಮಾಡುವ ಮೂಲಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬದಿಗೆ ಸರಿಸುವ ಸ್ಪಷ್ಟ ಪ್ರಯತ್ನ ನಡೆಯುತ್ತಿದೆ ಎಂಬುದು ಕಾಣುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ ಕಳೆ ಒಂದು ತಿಂಗಳಿನಲ್ಲಿ ಮಾತ್ರ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಒಂದು ವರ್ಷ ಗಡಿಪಾರು ಮಾಡಿದ್ದಾರೆ, ಈ ಕ್ರಮವನ್ನು ಅನೇಕರು ಅವರನ್ನು ಜೈಲಿಗೆ ಹಾಕುವ ಅಥವಾ ಪ್ರಕರಣದಿಂದ ದೂರವಿಡುವ ಪ್ರಯತ್ನವೆಂದು ನೋಡುತ್ತಿದ್ದಾರೆ. ಇದರಿಂದ ಧರ್ಮಸ್ಥಳ ಪ್ರಕರಣವನ್ನು ಬೇರೆ ದಿಕ್ಕಿಗೆ ತಿರುವಿಹಾಕಲು ಪ್ರಯತ್ನ ನಡೆಯುತ್ತಿದೆ ಎಂಬ ಅಭಿಪ್ರಾಯ ಜನರಲ್ಲಿ ಮೂಡುತ್ತಿದೆ ಎಂದು ಸಮೀರ್ ಎಂಡಿ ಅನುಮಾನ ಹೊರಹಾಕಿದ್ದಾರೆ.
ಇಂದಿನ ಚಿನ್ನದ ದರ: ಸ್ವಲ್ಪ ಇಳಿಕೆ ರೇಟ್ ಚೆಕ್ ಮಾಡಿ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


