ಅಬುಧಾಬಿ: ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್ 2025 ( Asia Cup 2025 ) ಟೂರ್ನಿಯಿಂದ ಶ್ರೀಲಂಕಾ ಹೊರಬಿದ್ದಿದೆ. ನಿನ್ನೆ ( ಸೆಪ್ಟೆಂಬರ್ 23 ) ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿ ಪಾಕ್‌ಗೆ 134 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಪಾಕಿಸ್ತಾನ 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿತು.
ಈ ಹಿಂದೆ ಬಾಂಗ್ಲಾದೇಶದ ವಿರುದ್ಧ ಸೂಪರ್ 4 ಹಂತದ ಪಂದ್ಯ ಸೋತಿದ್ದ ಶ್ರೀಲಂಕಾ ಈ ಪಂದ್ಯವನ್ನೂ ಸಹ ಸೋಲುವ ಮೂಲಕ ಆಡಿದ ಎರಡೂ ಪಂದ್ಯಗಳಲ್ಲೂ ಪರಾಭವಗೊಂಡು ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ವಿಫಲವಾಗಿದೆ. ಕಳೆದ ಸೂಪರ್ 4 ಪಂದ್ಯದಲ್ಲಿ ಭಾರತದ ವಿರುದ್ಧ ಸೋತ ಪಾಕಿಸ್ತಾನ ಈ ಗೆಲುವಿನ ಮೂಲಕ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇನ್ನು ಶ್ರೀಲಂಕಾವನ್ನು ಮಣಿಸಿರುವ ಬಾಂಗ್ಲಾದೇಶಕ್ಕೂ ಸಹ ಫೈನಲ್ ಪ್ರವೇಶಿಸುವ ಅವಕಾಶ ಹೆಚ್ಚಿದೆ. ಇಂದು ( ಸೆಪ್ಟೆಂಬರ್ 24 ) ನಡೆಯಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸೂಪರ್ 4 ಹಂತದ ಪಂದ್ಯ ಈ ಕಾರಣಕ್ಕಾಗಿ ರೋಚಕತೆಯಿಂದ ಕೂಡಿರಲಿದ್ದು, ನಾಳೆ ( ಸೆಪ್ಟೆಂಬರ್ 25 ) ನಡೆಯಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಯಾವ ತಂಡ ಫೈನಲ್ ಪ್ರವೇಶಿಸಲಿದೆ ಎಂಬುದನ್ನು ನಿರ್ಧರಿಸಲಿದೆ.
ಮೈಸೂರು ದಸರಾ 2025: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


