ಮೈಸೂರು: ಮಹಿಷ ಮಂಡಲೋತ್ಸವ ಸಮಿತಿ ವತಿಯಿಂದ ಇಂದು ಮೈಸೂರಿನ ಪುರಭವನದ ಆವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.
ಪುರಭವನದ ಆವರಣದಲ್ಲಿ ಬುದ್ಧ, ಅಂಬೇಡ್ಕರ್ ಹಾಗೂ ಮಹಿಷಾಸುರನ ಪಂಚಲೋಹದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ, ಕೊಳತ್ತೂರು ಟಿ.ಎಸ್.ಮಣಿ, ಪ್ರೊಫೆಸರ್ ಕೆ.ಎಸ್.ಭಗವಾನ್, ಇತಿಹಾಸ ತಜ್ಞ ಪಿ.ವಿ.ನಂಜರಾಜ ಅರಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಕಾರ್ಯಕ್ರಮ ನಡೆದ ಪುರಭವನದ ಸುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯನ್ನು ಕೂಡ ನಿಯೋಜನೆ ಮಾಡಲಾಗಿತ್ತು.
ಇನ್ನು ಇಂದು ಬೆಳಿಗ್ಗೆ ಮಹಿಷ ಮಂಡಲೋತ್ಸವದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿರುವ ಮಹಿಷನ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಟಾರ್ಪಲ್‌ನಲ್ಲಿ ಮಹಿಷನ ಪ್ರತಿಮೆ ಮುಚ್ಚಿ, ಯಾವುದೇ ಅಹಿತಕರ ಘಟನೆ ಜರುಗದಂತೆ ಖಾಕಿ ಕಟ್ಟೆಚ್ಚರ ವಹಿಸಿತ್ತು.
ಧರ್ಮಸ್ಥಳ ಪ್ರಕರಣವನ್ನು ಬೇರೆ ದಿಕ್ಕಿಗೆ ತಿರುವಿಹಾಕುವ ಯತ್ನ ನಡೆಯುತ್ತಿದೆ ಎಂದು ಅನುಮಾನ ಹೊರಹಾಕಿದ ಸಮೀರ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


