ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿ ಮಕ್ಕಳಿಗೆ ‘ರಾಗಿ ಹೆಲ್ತ್ ಮಿಕ್ಸ್’ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ ಮೂರರಿಂದ ಐದು ದಿನಗಳಿಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಕ್ಷೀರಭಾಗ್ಯ ಹಾಲಿನ ಜತೆ ಐದು ದಿನ ರಾಗಿ ಹೆಲ್ತ್ ಮಿಕ್ಸ್ ಪುಡಿ ನೀಡಲು ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರಂತೆ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲಾ ಶಿಕ್ಷಣ ಆಯುಕ್ತರಿಗೆ ಅನುಮತಿ ನೀಡಿ ಆದೇಶಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ನಿಂದ ವಾರದಲ್ಲಿ ಮೂರು ದಿನ ಕ್ಷೀರ ಭಾಗ್ಯ ಯೋಜನೆಯ ಬಿಸಿ ಹಾಲಿನ ಜತೆಗೆ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿ ವಿತರಿಸಲಾಗುತ್ತಿದೆ. ಇದನ್ನು ಇನ್ನುಮುಂದೆ ವಾರದಲ್ಲಿ 5 ದಿನಕ್ಕೆ ವಿಸ್ತರಿಸಲು ಒಪ್ಪಂದ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಅಲ್ಲದೆ, ಯೋಜನೆಗೆ ತಗಲುವ 100 ಕೋಟಿ ರೂ.ಗಳಲ್ಲಿ ಶೇ.25 ಅನ್ನು ಸರ್ಕಾರದಿಂದ ಭರಿಸಲು ಕ್ರಮ ವಹಿಸಬೇಕೆಂದು ಸೂಚಿಸಲಾಗಿದೆ.
ನವರಾತ್ರಿ: 3ನೇ ದಿನದ ಪೂಜೆ, ಚಂದ್ರಘಂಟಾ ದೇವಿಯ ಮಹತ್ವ, ಪೂಜಾ ಸಮಯ ಮತ್ತು ಮಂತ್ರಗಳು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


