ಬೆಂಗಳೂರು: ಕನ್ನಡ ಸಾಹಿತ್ಯ ವಲಯದ ಅಕ್ಷರ ಮಾಂತ್ರಿಕ ಹಾಗೂ ಸಾರಸತ್ವ ಲೋಕದ ಸರಸ್ವತಿ ಪುತ್ರನೆಂದೇ ಓದುಗರ ವಲಯದಲ್ಲಿ ಗುರುತಿಸಿಕೊಂಡಿದ್ದ, ಪ್ರತಿಷ್ಠಿತ ಪದ ಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ(94) ಅವರು ಆನಾರೋಗ್ಯದ ಹಿನ್ನಲೆಯಲ್ಲಿ ಗುರುವಾರ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ನಗರದ ರಾಜರಾಜೇಶ್ವರಿನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮಧ್ಯಾಹ್ನ ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ್ದ ಅವರು ಸಂಪಾದಕರೊಬ್ಬರ ನಿವಾಸದಲ್ಲಿ ವಾಸವಾಗಿದ್ದರು. ಕೆಲ ದಿನಗಳ ಹಿಂದೆ ಆನಾರೋಗ್ಯದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಅಸ್ಪತ್ರೆಗಾಗಿ ದಾಖಲಾಗಿದ್ದರು.
ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಲಿದೆ.ಇದಕ್ಕೂ ಮುನ್ನ ಮೈಸೂರಿನ ಕಲಾ ಮಂದಿರದಲ್ಲ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಅಂತ್ಯಕ್ರಿಯೆ ನಡೆಸಲು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 1934 ಜುಲೈ 26 ರಂದು ಜನಿಸಿದ್ದ ಅವರು, ರಾಷ್ಟ್ರಕವಿ ಕುವೆಂಪು ಅವರ ನಂತರ ಸಾಹಿತ್ಯ ವಲಯದಲ್ಲಿ ಬಹುದೊಡ್ಡ ಓದುಗರನ್ನು ಹೊಂದಿದ್ದ ಅಪರೂಪದ ಸಾಹಿತಿಯಾಗಿದ್ದರು.
ದೇಶದ 2ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಎನಿಸಿದ ಪದಭೂಷಣ ಪ್ರಶಸ್ತಿಗೂ ಭಾಜನರಾಗಿದ್ದ ಅವರಿಗೆ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಒಂದಿಲ್ಲೊಂದು ದಿನ ಸಿಕ್ಕೇ ಸಿಗುತ್ತದೆ ಎಂಬ ಓದುಗರ ನಿರೀಕ್ಷೆ ಕೊನೆಗೂ ಈಡೇರಲಿಲ್ಲ. ಅವರು ರಚಿಸಿದ್ದ ಅನೇಕ ಕೃತಿಗಳು ಇಂಗ್ಲೀಷ್‍ಗೆ ತರ್ಜುಮೆಗೊಂಡು ಪ್ರತಿಷ್ಠಿತ ಬೂಕರ್ ಪ್ರಶಸ್ತಿಯೂ ಅವರಿಗೆ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅದು ಕೂಡ ಅವರ ಜೀವಿತಾವಧಿಯಲ್ಲಿ ಸಾಧ್ಯವಾಗಲೇ ಇಲ್ಲ. ಇಂದಿಗೂ ಕೂಡ ಎಸ್‍ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ.
ಕಾದಂಬರಿಗಳ ಮೂಲಕ ಚಿರಪರಿಚಿತರಾಗಿದ್ದ ಅವರು ತಮ ಬರವಣಿಗೆಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೆ ಆದ ವಿಶಿಷ್ಟ ಕೊಡುಗೆ ನೀಡಿದ್ದರು.
ಇವರ ಹಲವು ಕಾದಂಬರಿಗಳು ಚಲನಚಿತ್ರಗಳಾಗಿಯೂ ಸಹ ನಿರ್ಮಾಣಗೊಂಡಿದ್ದವು. ಅವುಗಳ ಪಟ್ಟಿ ಮುಂದಿದೆ.
ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ ? (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).
ಭೈರಪ್ಪನವರ ಕಾದಂಬರಿಗಳು ಜನಪ್ರಿಯವಾಗಿವೆ. ಅವು ಹಲವು ಬಾರಿ ಮರುಮುದ್ರಣಗೊಂಡಿವೆ. ಅವರ ಕೃತಿಗಳು ಮರಾಠಿ, ಇಂಗ್ಲಿಷ್, ಹಿಂದಿ ಮೊದಲಾದ ಭಾಷೆಗಳಿಗೆ ಅನುವಾದವಾಗಿವೆ. “ವಂಶವೃಕ್ಷ”, “ತಬ್ಬಲಿಯು ನೀನಾದೆ ಮಗನೆ” ಕಾದಂಬರಿಗಳು ಚಲನಚಿತ್ರಗಳಾಗಿವೆ.
ರೈಲ್ವೆ ನೌಕರರಿಗೆ ದಸರಾ ಗಿಫ್ಟ್: ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


