ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನತೇಕೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಲೀಪರ್ ಬಸ್ ಹೊತ್ತಿ ಉರಿದಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್ಗೆ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಒಂದು ಡಿಕ್ಕಿ ಹೊಡೆದಿದೆ. ಅಲ್ಲದೇ ಬೈಕ್ ಹಿಂಬದಿಯಿಂದ ಬಸ್ನ ಕೆಳ ಹೊಕ್ಕು ಡೀಸೆಲ್ ಟ್ಯಾಂಕ್ಗೆ ಗುದ್ದಿದ ಪರಿಣಾಮ ದಿಢೀರನೆ ಬೆಂಕಿ ಹೊತ್ತಿಕೊಂಡು ನಿಮಿಷಗಳಲ್ಲೇ ಇಡೀ ಬಸ್ ಸುಟ್ಟು ಕರಕಲಾಗಿದೆ.
ಇನ್ನು ಕಂಡಕ್ಟರ್ ಹಾಗೂ ಡ್ರೈವರ್ ಸೇರಿದಂತೆ ಬಸ್ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 12 ಮಂದಿ ಬಸ್ನಿಂದ ಇಳಿದು ಸಾವಿನಿಂದ ಪಾರಾಗಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಡರಾತ್ರಿ 3.30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ಬೈಕ್ ಬಸ್ನ ಡೀಸೆಲ್ ಟ್ಯಾಂಕ್ಗೆ ಗುದ್ದಿದ್ದ ಪರಿಣಾಮ ಸಿಬ್ಬಂದಿ ಬರುವಷ್ಟರಲ್ಲಿ ಇಡೀ ಬಸ್ ಬೆಂಕಿಗೆ ಆಹುತಿಯಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


